ಗುರುವಾರ , ಆಗಸ್ಟ್ 18, 2022
24 °C
ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಎನ್‌ಎಸ್‌ಯುಐ ಕಾರ್ಯಕರ್ತರ ಘೋಷಣೆ

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಮತ್ತು ಎನ್‌ಎಸ್‌ಯುಐ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಶನಿವಾರ ನಗರದ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನಡೆಸಿದರು.

ನಗರದ ಬೆಂಗಳೂರು ವೃತ್ತದಲ್ಲಿರುವ ಪೆಟ್ರೋಲ್ ಬಂಕ್ ಬಳಿ ಜಮಾವಣೆಗೊಂಡ ಕಾರ್ಯಕರ್ತರು ಬೆಲೆ ಏರಿಕೆಯ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಎನ್‌ಎಸ್‌ಯುಐ ಮುಖಂಡ ಮುನೀಂದ್ರ ಮಾತನಾಡಿ, ‘ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಒಂದೇ ದಿನ ರಾಜ್ಯದಾದ್ಯಂತ 5 ಸಾವಿರ ಪೆಟ್ರೋಲ್ ಬಂಕ್‌ಗಳ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಕೊರೊನಾ ಸಂಕಷ್ಟ ಸಮಯದಲ್ಲಿ ಜನ ಜೀವನ ನಡೆಸಲು ಪರದಾಡುತ್ತಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್, ಗ್ಯಾಸ್ ಬೆಲೆ ಏರಿಕೆಯಿಂದ ಎಲ್ಲ ವಸ್ತುಗಳ ಬೆಲೆಗಳ ಏರಿಕೆಯಾಗಿದೆ’ ಎಂದು ಟೀಕಿಸಿದರು.

ಮನಮೋಹನಸಿಂಗ್ ಪ್ರಧಾನಿಯಾಗಿದ್ದಾಗ ಗ್ಯಾಸ್ ಸಿಲಿಂಡರ್‌ ₹414 ಗೆ ಸಿಗುತ್ತಿತ್ತು. ಅದಕ್ಕೂ ಸಬ್ಸಿಡಿ ದೊರೆಯುತ್ತಿತ್ತು. ಈಗ ₹820 ಆಗಿದೆ. ಹೀಗಿದ್ದರೂ ಸಬ್ಸಿಡಿ ನೀಡುತ್ತಿಲ್ಲ ಎಂದು ದೂರಿದರು.

₹ 35ಕ್ಕೆ ಸಿಗುವ ಲೀಟರ್ ಪೆಟ್ರೋಲ್‌ಗೆ ವಿವಿಧ ತೆರಿಗೆಗಳನ್ನು ವಿಧಿಸಿ ₹ 100ಕ್ಕೆ ಏರಿಕೆ ಮಾಡಿದ್ದಾರೆ. ಕೇಂದ್ರ ಸರ್ಕಾರ ₹20 ಲಕ್ಷ ಕೋಟಿ ಪಡೆಯುತ್ತಿದೆ. ಬಡವರ ಮೇಲೆ ಲಕ್ಷಾಂತರ ಕೋಟಿ ತೆರಿಗೆಯನ್ನು ಹಾಕಿ ಸಾವಿರಾರು ಕೋಟಿ ಖರ್ಚು ಮಾಡಿ ಸೆಂಟ್ರಲ್ ವಿಸ್ತಾ, ವಲ್ಲಬಾಯಿ ಪಟೇಲ್ ಪ್ರತಿಮೆ ಮುಂತಾದ ಅನಗತ್ಯ ಖರ್ಚು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕೋನಪ್ಪಲ್ಲಿ ಕೋದಂಡ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅಚ್ಛೇ ದಿನ್ ಆಯೆಗಾ ಎಂದು ತಿಳಿಸಿದ್ದರು. ದೇಶದಾದ್ಯಂತ ಇಂದು ಜನರು ಇರುವ ಉದ್ಯೋಗಗಳನ್ನು ಕಳೆದುಕೊಂಡು ಪರಿತಪಿಸುತ್ತಿದ್ದಾರೆ. ಗಾಯದ ಮೇಲೆ ಬರೆ ಎಂಬಂತೆ ಪೆಟ್ರೋಲ್ ಮತ್ತು ಡೀಸೆಲ್, ಗ್ಯಾಸ್ ಬೆಲೆ ಏರಿಕೆಯಿಂದ ಜನಸಾಮಾನ್ಯರ ಒದ್ದಾಡುತ್ತಿದ್ದಾರೆ. ಇದೇನಾ ಅಚ್ಛೇ ದಿನ್’ ಎಂದು ಪ್ರಶ್ನಿಸಿದರು.

ಮುಖಂಡ ನಿಜಾಮ್, ರಾಜೇಶ್, ಸೈಯದ್ ರಫೀಕ್, ಸೈಯದ್ ಖಾದರ್ ಮುನ್ನ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.