ಗುಡಿಬಂಡೆ: ‘ಬಿಜೆಪಿ ಮುಖಂಡ ಸಿ.ಮುನಿರಾಜು ನಾಲಿಗೆ ಬಿಗಿಹಿಡಿದು ಮಾತನಾಡಬೇಕು. ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಬಗ್ಗೆ ಮಾತನಾಡುವಾಗ ನಾಲಿಗೆ ಹರಿಬಿಟ್ಟರೆ ಉಗ್ರವಾದ ಹೋರಾಟ ಮಾಡಲಾಗುವುದು’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿರೆಡ್ಡಿ ಎಚ್ಚರಿಕೆ ನೀಡಿದರು.

ಶನಿವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕ್ಷೇತ್ರದಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಅಭಿವೃದ್ಧಿ ಕೆಲಸ ಮಾಡಿ ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದಾರೆ. ಸಿ.ಮುನಿರಾಜು ಬೆಂಗಳೂರಿನಿಂದ ಬಂದವರು. ಈ ಕ್ಷೇತ್ರದ ಬಗ್ಗೆ ಏನು ಗೊತ್ತಿದೆ. ಶಾಸಕರ ಬಗ್ಗೆ ಹಗುರವಾಗಿ ಮಾತನಾಡಿದರೆ ಕಾಂಗ್ರೆಸ್ ಕಾರ್ಯಕರ್ತರು ಸುಮ್ಮನೆ ಇರುವುದಿಲ್ಲ ಎಂದರು.

ಮುಖಂಡ ಕೃಷ್ಣೇಗೌಡ ಮಾತನಾಡಿ, ಅನವಶ್ಯಕವಾಗಿ ಶಾಸಕರ ಅಭಿವೃದ್ಧಿ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ. ಕ್ಷೇತ್ರದಲ್ಲಿ ಶಾಸಕರಾಗಲು ಹಗಲು ಕನಸನ್ನು ಕಾಣುತ್ತಿದ್ದಾರೆ ಎಂದು ಹೇಳಿದರು.

ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಲೇನಹಳ್ಳಿ ರಮೇಶ್ ಮಾತನಾಡಿ, ಕ್ಷೇತ್ರದಲ್ಲಿ ಶಾಸಕ ಮಾಡುತ್ತಿರುವ ಅಭಿವೃದ್ಧಿಯನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಸಾಧ್ಯವಾಗದೇ ಮಾತನಾಡುತ್ತಿದ್ದಾರೆ. ಆರೋಪಗಳನ್ನು ಮಾಡುತ್ತಾ ಮಾತನಾಡಿದರೆ ಗ್ರಾಮ ಮಟ್ಟಗಳಿಂದ ಪ್ರತಿಭಟಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಕೆಡಿಪಿ ಸದಸ್ಯ ಎಚ್.ಪಿ ಲಕ್ಷ್ಮಿನಾರಾಯಣ, ರಿಯಾಜ್, ನಂಜುಂಡ, ವಿಕಾಸ್, ಬ್ರಾಹ್ಮಣರಹಳ್ಳಿ ನರಸಿಂಹಮೂರ್ತಿ, ಗಣೇಶ್, ಅಂಬರೀಶ್, ಗುರಮೂರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.