ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗೇಪಲ್ಲಿ: ಕಾಂಗ್ರೆಸ್‌ ಕಾರ್ಯಕರ್ತರಿಂದ ಹೆದ್ದಾರಿ ತಡೆದು ಆಕ್ರೋಶ

Last Updated 25 ಮಾರ್ಚ್ 2023, 6:08 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್‌ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆದು, ಬಾಯಿ ಬಡಿದುಕೊಂಡು ಪ್ರತಿಭಟನೆ ನಡೆಸಿದರು.

ಯುವ ಕಾಂಗ್ರೆಸ್‌ ರಾಜ್ಯ ಘಟಕ ಅಧ್ಯಕ್ಷ ಮಹಮ್ಮದ್‌ ಹ್ಯಾರಿಸ್‌ ನಲಪಾಡ್‌ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಬಳಿ ಬಾಗೇಪಲ್ಲಿ ಟೋಲ್ ಪ್ಲಾಜಾದಲ್ಲಿ ಶುಕ್ರವಾರ ಸಂಜೆ ರಸ್ತೆ ತಡೆ ನಡೆಸಿದರು. ಇದರಿಂದ ವಾಹನ ದಟ್ಟಣೆ ಉಂಟಾಗಿ, ಬೆಂಗಳೂರು–ಹೈದರಾಬಾದ್ ನಡುವಿನ ಸಂಚರಿಸುತ್ತಿದ್ದ ನೂರಾರು ವಾಹನಗಳು ಬಹಳ ಹೊತ್ತು ಕಾದು ನಿಲ್ಲಬೇಕಾಯಿತು. ಪ್ರಯಾಣಿಕರು ಪರದಾಡುವಂತಾಯಿತು.

ಮುಖಂಡರು, ಕಾರ್ಯಕರ್ತರು ಮತ್ತು ಮಹಿಳೆಯರು ಬಾಯಿ ಬಡಿದುಕೊಂಡು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ಸೇಡಿನ ರಾಜಕಾರಣ ನಡೆಸುತ್ತಿದೆ. ರಾಹುಲ್ ಗಾಂಧಿ ಅವರಿಗೆ ಜೈಲು ಶಿಕ್ಷೆ ವಿಧಿಸಿ, ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಿರುವುದು ಖಂಡನೀಯ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಮಹಮ್ಮದ್‌ ಹ್ಯಾರಿಸ್‌ ನಲಪಾಡ್‌ ಕಿಡಿಕಾರಿದರು.

ಸದಸ್ಯತ್ವ ರದ್ದುಗೊಳಿಸಿರುವುದು ಹಿಂಪಡೆದು, ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿದರು

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬಾಗೇಪಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್‌ ಬಿ.ಎಚ್.ಮುನಿಕೃಷ್ಣ, ಪ್ರತಿಭಟನಕಾರರನ್ನು ಮನವೊಲಿಸಿ ಸಮಾಧಾನಪಡಿಸಿದರು. ಬಳಿಕ ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ವಾಪಸ್‌ ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT