ಮಂಗಳವಾರ, ಏಪ್ರಿಲ್ 20, 2021
32 °C

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಜನಧ್ವನಿ ಯಾತ್ರೆಗೆ ಬಂದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಜಯಕಾರದ ಘೋಷಣೆಗಳ‌ ಮೂಲಕ ಸ್ವಾಗತಿಸಿದರು.

ಕಂದಾವರ ಕೆರೆಗೆ ಬಾಗಿನ‌ ಅರ್ಪಿಸಿ ಬಂದ ನಾಯಕರನ್ನು ಬಿಬಿ ರಸ್ತೆಯಲ್ಲಿ ಸ್ವಾಗತಿಸಲಾಯಿತು. 

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜನರತ್ತ ಕೈ ಬೀಸುತ್ತ ತೆರೆದ ವಾಹನದಲ್ಲಿ ಯಾತ್ರೆ ಆರಂಭಿಸಿದ್ದಾರೆ. ಪಕ್ಷದ ರಾಜ್ಯ ನಾಯಕರು ಸಾಥ್ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ನೆನ್ನೆಯೇ ರಾಜೀನಾಮೆ ಕೊಡ ಬೇಕಿತ್ತು: ರಮೇಶ್ ಜಾರಕಿಹೊಳಿ ನಿನ್ನೆಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು. ತಮ್ಮ ಅಕ್ರಮಗಳಿಗೆ ಕರ್ನಾಟಕ ಭವನ ಸೇರಿದಂತೆ ಸರ್ಕಾರಿ ಬಂಗಲೆಗಳನ್ನು ದುರುಪಯೋಗ ಮಾಡಿಕೊಂಡಿರುವುದು ಅಕ್ರಮ ಎಂದು ಸಿದ್ದರಾಮಯ್ಯ ತಿಳಿಸಿದರು. 

ಇಲ್ಲಿನ ಕಂದಾವರ ಕೆರೆಗೆ ಬಾಗಿನ ಅರ್ಪಿಸಿ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು