ಭಾನುವಾರ, ಜನವರಿ 26, 2020
20 °C
ಕಾಂಗ್ರೆಸ್ ಮುಖಂಡರ ಮಂಗಳೂರು ಭೇಟಿಗೆ ಟೀಕೆ

ಕಾಂಗ್ರೆಸ್‌ನವರು ಬೆಂಕಿ ಹಚ್ಚಲು ಹೊರಟಿದ್ದಾರೆ: ಶಾಸಕ ಡಾ.ಕೆ.ಸುಧಾಕರ್ ವಾಗ್ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಯಾವ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆಯೋ ಆ ರಾಜ್ಯದಲ್ಲಿ ಕೋಮು ಗಲಭೆ ಮಾಡಿಸುವುದು ಕಾಂಗ್ರೆಸ್ ಷಡ್ಯಂತ್ರ. ಪ್ರಕ್ಷುಬ್ಧಗೊಂಡಿರುವ ಮಂಗಳೂರಿಗೆ ಕಾಂಗ್ರೆಸ್‌ ನಾಯಕರು ಬೆಂಕಿ ಆರಿಸಲು ಹೋಗುತ್ತಿಲ್ಲ. ಬದಲು, ಉರಿಯುವ ಬೆಂಕಿಗೆ ತುಪ್ಪವಲ್ಲ ಎಲ್‌ಪಿಜಿ ಹಾಕಿ ಉರಿಸುವ ಉದ್ದೇಶಕ್ಕೆ ಹೋಗುತ್ತಿದ್ದಾರೆ’ ಎಂದು ಶಾಸಕ ಡಾ.ಕೆ.ಸುಧಾಕರ್ ಆರೋಪಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶಕ್ಕೆ ಕಾಂಗ್ರೆಸ್‌ನವರು ಹೋಗುವ ಅವಶ್ಯಕತೆ ಏನಿದೆ? ರಾಜ್ಯದಲ್ಲಿ ಹಿಂಸಾಚಾರಕ್ಕೆ ಕಾಂಗ್ರೆಸ್‌ ಕುಮ್ಮಕ್ಕು ನೀಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಕಾಂಗ್ರೆಸ್ ಮತ್ತು ಕಮ್ಯುನಿಸ್ಟರು ಮಂಗಳೂರಿಗೆ ಯಾವ, ಯಾವ ರಾಜ್ಯಗಳಿಂದ ಜನರನ್ನು ಕರೆತಂದಿದ್ದರು ಎನ್ನುವುದು ತನಿಖೆಯ ಬಳಿಕ ಬಯಲಿಗೆ ಬರಲಿದೆ’ ಎಂದು ತಿಳಿಸಿದರು.

‘ಕಾಂಗ್ರೆಸ್‌ನವರು ರಾಜಕೀಯವಾಗಿ ಹತಾಶರಾಗಿ, ರಾಜಕೀಯ ಲಾಭಕ್ಕಾಗಿ ಈ ರೀತಿಯ ಕೀಳುಮಟ್ಟದ ರಾಜಕಾರಣ ಮಾಡುತ್ತಾರೆ ಎಂದು ನಾನು ಊಹೆ ಮಾಡಿರಲಿಲ್ಲ. ಕೆಲ ರಾಜಕೀಯ ಪಕ್ಷಗಳು ಮುಗ್ಧ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ. ಕೆಲ ಮುಗ್ಧ ಜನರು ಕೂಡ ದಿಕ್ಕು ತಪ್ಪಿ ಬೀದಿಗೆ ಬರುತ್ತಿದ್ದಾರೆ’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು