ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಡ್ಲಘಟ್ಟ: ಸಂವಿಧಾನ ಜಾಗೃತಿ ಜಾಥಾ

Published 13 ಫೆಬ್ರುವರಿ 2024, 14:18 IST
Last Updated 13 ಫೆಬ್ರುವರಿ 2024, 14:18 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು ಎಂದು ಸುಂಡ್ರಹಳ್ಳಿ ಇಂದಿರಾಗಾಂಧಿ ವಸತಿ ಶಾಲೆ ಪ್ರಾಂಶುಪಾಲ ಆರ್.ಮೂರ್ತಪ್ಪ ಹೇಳಿದರು.

ತಾಲ್ಲೂಕಿನ ಜಂಗಮಕೋಟೆ ಹೋಬಳಿ ಸುಂಡ್ರಹಳ್ಳಿಯಲ್ಲಿ ಇಂದಿರಾಗಾಂಧಿ ವಸತಿ ಶಾಲೆ ಮಕ್ಕಳಿಂದ ಮಂಗಳವಾರ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಸಂವಿಧಾನ ನಮಗೆ ನೀಡಿರುವ ಹಕ್ಕುಗಳು ಎಷ್ಟು ಮುಖ್ಯವೋ ಕರ್ತವ್ಯ ಕೂಡ ಅಷ್ಟೇ ಮುಖ್ಯ ಎನ್ನುವುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ದುರುಪಯೋಗ ಮಾಡಿಕೊಳ್ಳಬಾರದು ಎಂದರು.

ವಿದ್ಯಾರ್ಥಿಗಳು ಗ್ರಾಮದಲ್ಲಿ ಸಂಚರಿಸಿ ಸಂವಿಧಾನ ಹಾಗೂ ಅದರ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.

ಇಂದಿರಾಗಾಂಧಿ ವಸತಿ ಶಾಲೆ ಶಿಕ್ಷಕರಾದ ಕೆ.ಎಸ್.ನಮ್ರತ, ಎಂ.ಎಚ್.ಆಶಾ, ಲಕ್ಷ್ಮಿ.ಎನ್, ಎಂ.ವೆಂಕಟಸ್ವಾಮಿ, ಎಸ್.ಎನ್.ಗಣೇಶ್, ಕೆ.ಕೆ.ಸುಬ್ರಮಣಿ, ಸುಮಾ, ಗಂಗಾಧರ, ಸರಳಾ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT