ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿ: ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ದೂರಿ ಸ್ವಾಗತ

Published 17 ಫೆಬ್ರುವರಿ 2024, 13:31 IST
Last Updated 17 ಫೆಬ್ರುವರಿ 2024, 13:31 IST
ಅಕ್ಷರ ಗಾತ್ರ

ಚಿಂತಾಮಣಿ: ಪ್ರಜಾಪ್ರಭುತ್ವವು ಕೇವಲ ಸರ್ಕಾರದ ಒಂದು ರೂಪವಲ್ಲ. ಸಹಬಾಳ್ವೆಯ ಸೊಗಸು ಮತ್ತು ಅನುಭವವನ್ನು ಪರಸ್ಪರ ದಟ್ಟೈಸುವ ಜೋಡಣೆ ಎಂದು ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ನಾಯ್ಕ್ ತಿಳಿಸಿದರು.

ತಾಲ್ಲೂಕಿನ ಕೈವಾರ, ಮಸ್ತೇನಹಳ್ಳಿ, ಕೋನಪ್ಪಲ್ಲಿ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಶನಿವಾರ ನಡೆದ ಸಂವಿಧಾನ ಜಾಗೃತಿ ಜಾಥಾದಲ್ಲಿ ಮಾತನಾಡಿದರು.

ಪೀಠಿಕೆಯ ಮೊದಲ ಪದಗಳು ನಾವು, ಜನಗಳು. ಭಾರತದಲ್ಲಿ ಅಧಿಕಾರ ಜನಗಳ ಕೈಯಲ್ಲಿದೆ ಎಂಬ ಅಂಶದ ಪ್ರಾಮುಖ್ಯತೆಯನ್ನು ಹೇಳುತ್ತದೆ. ಪೀಠಿಕೆಯು, ಭಾರತದ ಪ್ರತಿಯೊಬ್ಬ ನಾಗರಿಕ ಹಾಗೂ ಸರ್ಕಾರ ಅನುಸರಿಸಬೇಕಾದ ಮತ್ತು ಸಾಧಿಸಬೇಕಾದ ರಾಷ್ಟ್ರೀಯ ಧ್ಯೇಯಗಳನ್ನು ಬಿಡಿಸಿ ಹೇಳುತ್ತದೆ ಎಂದರು.

ಸಂವಿಧಾನ ಜಾಗೃತಿ ಜಾಥ ಸ್ಥಬ್ದಚಿತ್ರಗಳ ರಥದೊಂದಿಗೆ ತಾಲ್ಲೂಕಿನ ಕೈವಾರ, ಕೋನಪ್ಪಲ್ಲಿ, ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಬಂದಾಗ ಅದ್ದೂರಿ ಸ್ವಾಗತ ನೀಡಲಾಯಿತು. ಮಹಿಳೆಯರು ಕಳಶ ಹೊತ್ತು ಪೂರ್ಣಕುಂಭಗಳೊಂದಿಗೆ ಬರಮಾಡಿಕೊಂಡರು.

ವಿವಿಧ ಕಲಾತಂಡಗಳ ಕಲಾವಿದರು ವಿವಿಧ ನೃತ್ಯ, ಕೋಲಾಟ ನಡೆಸಿಕೊಟ್ಟರು. ರಾಷ್ಟ್ರಪಿತ ಮಹಾತ್ಮಗಾಂಧೀಜಿ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ವೇಷಧಾರಿಗಳು ನೋಡುಗರ ಕಣ್ಮನ ಸೆಳೆದರು.

ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಗಿರಿಜಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮಾ, ಸದಸ್ಯ ಅಂಬರೀಶ್, ಶೈಲಜಾ ಮಂಜುನಾಥ್, ಅಭಿವೃದ್ಧಿ ಅಧಿಕಾರಿ ಕರಿಬಸಪ್ಪ, ಕಲಾವಿದ ಮುನಿರೆಡ್ಡಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT