ಗೌರಿಬಿದನೂರು: ನಗರದ ನೇತಾಜಿ ಕ್ರೀಡಾಂಗಣದಲ್ಲಿ ಗುರುವಾರ ತಾಲ್ಲೂಕು ಆಡಳಿತದ ವತಿಯಿಂದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಮಾತನಾಡಿ, ‘ಸಂವಿಧಾನದ ಆಶಯಗಳಿಗೆ ಬದ್ಧವಾಗಿ ನಾಗರಿಕರ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದರು.

‘ಭಾರತದಲ್ಲಿ ವಿವಿಧ ಜನಾಂಗ, ವರ್ಗ ಮತ್ತು ಬುಡಕಟ್ಟಿನ ಜನ ವಾಸವಾಗಿದ್ದು, ಇವರೆಲ್ಲರ ಸ್ವಾತಂತ್ರ್ಯಕ್ಕೆ ಹಲವು ಮಹನೀಯರು ಶ್ರಮಿಸಿದ್ದಾರೆ. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನವು ನಮಗೆ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ. ಇದರಿಂದಾಗಿ ದೇಶದಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸಿದ್ದು, ಪ್ರತಿಯೊಬ್ಬರಿಗೂ ಸಮಾನತೆಯ ಬದುಕು ಕಲ್ಪಿಸಿಕೊಟ್ಟಿದೆ’ ಎಂದರು.

ತಹಶೀಲ್ದಾರ್ ಎಚ್. ಶ್ರೀನಿವಾಸ್ ಮಾತನಾಡಿ, ದೇಶದಲ್ಲಿನ ಪ್ರತಿಯೊಬ್ಬರೂ ಜಾತಿ, ಧರ್ಮ, ಲಿಂಗ ಭೇದ ಮರೆತು ನೆಮ್ಮದಿಯ ಬದಕು ಸಾಗಿಸುವುದೇ ಸಂವಿಧಾನದ ಆಶಯವಾಗಿದೆ. ಜನತೆಯ ಸಹಕಾರ ಮತ್ತು ಸೌಹಾರ್ದಯುತ ಸಹಭಾಳ್ವೆಯು ಜನತೆಯಲ್ಲಿ ಸಾಮರಸ್ಯ ಮೂಡಿಸುತ್ತದೆ. ದೇಶದ ರಕ್ಷಣೆಗೆ ಶ್ರಮಿಸುವ ಸೈನಿಕರು, ರೈತರು, ವಿಜ್ಞಾನಿಗಳು, ತತ್ವಜ್ಞಾನಿಗಳು ಸೇರಿದಂತೆ ಇತರರ ಶ್ರಮಕ್ಕೆ ಬೆಲೆ ಕಟ್ಟಲಾಗದು ಎಂದರು.

ತಾ. ಪಂ ಇಒ ಆರ್. ಹರೀಶ್, ನಗರಸಭೆ ಪೌರಾಯುಕ್ತೆ ಡಿ.ಎಂ. ಗೀತಾ, ನಗರಸಭೆ ಅಧ್ಯಕ್ಷೆ ಎಸ್. ರೂಪ, ಉಪಾಧ್ಯಕ್ಷೆ ಭಾಗ್ಯಮ್ಮ, ಬಿಇಒ ಕೆ.ವಿ. ಶ್ರೀನಿವಾಸಮೂರ್ತಿ, ನಗರ ಯೋಜನಾ ಪ್ರಾಧೀಕಾರದ ಅಧ್ಯಕ್ಷ ಬಿ.ಜಿ. ವೇಣುಗೋಪಾಲರೆಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಿ.ಎನ್. ಮಧುಸೂದನ ರೆಡ್ಡಿ, ಡಿ.ಎನ್. ವೆಂಕಟರೆಡ್ಡಿ, ರಾಮಪ್ಪ, ಮಂಜುಳಾ, ಕೆ.ಎಂ. ಗಾಯತ್ರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.