ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಡಾ.ಕೆ.ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Last Updated 27 ಜುಲೈ 2020, 16:02 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ಸೋಮವಾರ ಜಿಲ್ಲಾ ಉಸ್ತುವಾರಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸುಮಾರು ₹4.75 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ನೂತನ ಕಟ್ಟಡಗಳನ್ನು ಉದ್ಘಾಟಿಸಿದರು.

ನಂದಿ ಹೋಬಳಿ ಕೇಂದ್ರದಲ್ಲಿ ಕಂದಾಯ ಇಲಾಖೆಯ ವತಿಯಿಂದ ₹20 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನಾಡಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಸಚಿವರು, ಬಳಿಕ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಿಂದ ₹70 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸುತ್ತಿರುವ ಕಳವಾರ-ಪಾಪಾಘ್ನಿ ರಸ್ತೆ ಹಾಗೂ ₹1.80 ಕೋಟಿ ವೆಚ್ಚದ ಬೊಮ್ಮೇನಹಳ್ಳಿಯಿಂದ ರಾಗಿಮಾಕಲಹಳ್ಳಿ ಮಾರ್ಗವಾಗಿ ಯಾಪಲಹಳ್ಳಿ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಲೋಕೋಪಯೋಗಿ ಇಲಾಖೆ ನಬಾರ್ಡ್ ಯೋಜನೆ ಅಡಿ ತಲಾ ₹11 ಲಕ್ಷದಂತೆ ಕ್ಷೇತ್ರದ ಆರು ಸರ್ಕಾರಿ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಮಂಚೇನಹಳ್ಳಿ ಹೋಬಳಿ ಶಾಂಪುರ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ₹41.45 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಹಾಗೂ ರಾಜೀವ್ ಗಾಂಧಿ ಸೇವಾ ಕೇಂದ್ರವನ್ನು ಉದ್ಘಾಟಿಸಿದರು.

ಹಳೇಹಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಅಡಿ ‌₹1 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೌಜಿ಼ಯಾ ತರನ್ನಮ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ ಹಾಗೂ ಮುಖಂಡರಾದ ಕೆ.ವಿ.ನಾಗರಾಜ್, ಎಪಿಎಂಸಿ ನಾರಾಯಣಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ನಾಗೇಶ್, ಎಂ.ಎಫ್.ಸಿ ನಾರಾಯಣಸ್ವಾಮಿ, ಮುರಳಿ, ನಾರಾಯಣಸ್ವಾಮಿ, ಸುಬ್ಬಾರೆಡ್ಡಿ, ಸುದರ್ಶನರೆಡ್ಡಿ, ಮುನಿಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT