ಸೋಮವಾರ, ಏಪ್ರಿಲ್ 19, 2021
32 °C
ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಡಾ.ಕೋಡಿರಂಗಪ್ಪ ಸ್ಪರ್ಧೆ

ಚಿಕ್ಕಬಳ್ಳಾಪುರ: ಸಾಹಿತ್ಯದ ಬೆಳವಣಿಗೆಗೆ ಸಹಕಾರ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗೇಪಲ್ಲಿ: ‘ಜಿಲ್ಲೆಯಲ್ಲಿ ಸಾಹಿತ್ಯ ಮತ್ತು ಹೋರಾಟಗಳಿಗೆ ಇತಿಹಾಸ ಇದೆ. ಅದನ್ನು ಉಳಿಸಿ, ಬೆಳೆಸಲು ಎಲ್ಲರ ಸಹಕಾರ ಅಗತ್ಯ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಡಾ.ಕೋಡಿರಂಗಪ್ಪ ಹೇಳಿದರು.

ಪಟ್ಟಣದ ರಾಮಕೃಷ್ಣ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಚುನಾವಣಾ ಪೂರ್ವ ಸೌಹಾರ್ದ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ಅಭಿವೃದ್ಧಿಗೆ ಅನೇಕ ಮಹನೀಯರು ದುಡಿದಿದ್ದಾರೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕನ್ನಡ ಭಾಷೆಯನ್ನು ಗಟ್ಟಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರ್ ಎಂ. ವಿಶ್ವೇಶ್ವರಯ್ಯ, ಡಾ.ಎಚ್. ನರಸಿಂಹಯ್ಯರಂತಹ ಮಹನೀಯರ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದರು.

‘ವೃತ್ತಿಯಲ್ಲಿ ಶಿಕ್ಷಕ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದೇನೆ. ಜಿಲ್ಲೆಯ ಸಮಸ್ಯೆ, ಸವಾಲು, ಶಿಕ್ಷಣ, ಆರೋಗ್ಯ, ಉದ್ಯೋಗ, ಕಲೆ, ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಸಮಗ್ರವಾಗಿ ಚಿಂತನೆ ಮಾಡಿದ್ದೇನೆ. ಮಕ್ಕಳ ಶಿಕ್ಷಣದ ಮಟ್ಟದ ಬಗ್ಗೆ ಅಧ್ಯಯನ ಮಾಡಲಾಗಿದೆ’ ಎಂದು ಹೇಳಿದರು.

‘ನಾನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕು ಎಂದು ಜಿಲ್ಲಾ ಸಾಹಿತ್ಯಾಭಿಮಾನಿಗಳು ಕೋರಿಕೆ ಇಟ್ಟಿದ್ದಾರೆ. ನನ್ನ ಮೇಲೆ ವಿಶ್ವಾಸ ಇರಿಸಿದ್ದಾರೆ. ಇದರಿಂದ ಅನಿವಾರ್ಯವಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ’ ಎಂದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎ.ಜಿ. ಸುಧಾಕರ್ ಮಾತನಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ಗೆ ಇತಿಹಾಸ ಇದೆ. ಅನೇಕ ಮಹನೀಯರು ಸಾಹಿತ್ಯವನ್ನು ಉಳಿಸಿ, ಬೆಳೆಸಲು ಅವಿರತ ಶ್ರಮ ಹಾಕಿದ್ದಾರೆ. ಆದರೆ, ಕೆಲವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಏಕವ್ಯಕ್ತಿಯಾಗಿ ಚಲಾವಣೆ ಮಾಡಿರುವುದು ಸರಿಯಲ್ಲ ಎಂದು ಟೀಕಿಸಿದರು.

ಸಭೆಯಲ್ಲಿ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲ ಡಾ.ರಾಮಯ್ಯ, ಸಾಹಿತಿಗಳಾದ ಗೋಪಾಲಗೌಡ ಕಲ್ವಮಂಜಲಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹನುಮಂತರಾವ್, ಸಾಹಿತ್ಯಾಭಿಮಾನಿಗಳಾದ ಮುನಿರಾಜು, ಮಂಚನಬಲೆ ಶ್ರೀನಿವಾಸ್, ಯಲುವಳ್ಳಿ ಸೊಣ್ಣೇಗೌಡ, ಚಲಪತಿಗೌಡ, ಸುಷ್ಮಾ ಶ್ರೀನಿವಾಸ್, ಆರ್. ಹನುಮಂತರೆಡ್ಡಿ, ಡಾ.ಚಿನ್ನಕೈವಾರಮಯ್ಯ, ಎಸ್. ಮುನಿರಾಮಯ್ಯ, ಬಿ.ಎಂ. ನಾಗಭೂಷಣಾರಾಧ್ಯ, ಉಮೇಶ್ ಭಾವಿಕಟ್ಟಿ, ಮುನಿರಾಜು, ಎಂ.ಸಿ. ನಂಜುಂಡಪ್ಪ, ಶ್ರೀನಿವಾಸನಾಯ್ಡು, ಬಿ.ಎಸ್. ನಾರಾಯಣಸ್ವಾಮಿ, ಭಾಗ್ಯನಗರ ಶ್ರೀನಿವಾಸ್, ವಿ. ಅಶ್ವಥ್ಥನಾರಾಯಣ, ವಿ. ಸುಕನ್ಯಾ, ಧರ್ಮಪುತ್ರಿ, ರಾಜೇಶ್ವರಿ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.