ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಚಿಕಿತ್ಸೆ ಪಡೆದ 55 ಮಂದಿ‌ ಮನೆಗೆ

ಗೌರಿಬಿದನೂರು ತಾಲ್ಲೂಕಿನ ಅಲೀಪುರ ನಿವಾಸಿಗಳು
Last Updated 23 ಜುಲೈ 2020, 16:47 IST
ಅಕ್ಷರ ಗಾತ್ರ

ಗೌರಿಬಿದನೂರು: ತಾಲ್ಲೂಕಿನ ಅಲೀಪುರದಲ್ಲಿ ಇತ್ತೀಚೆಗೆ ಕೋವಿಡ್‌ ದೃಢಪಟ್ಟಿದ್ದ ಸುಮಾರು 55 ಮಂದಿಗೆ ಸ್ಥಳೀಯ ಕೋವಿಡ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಬಿಡುಗಡೆಗೊಳಿಸಲಾಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಚಂದ್ರ ಮೋಹನ್ ರೆಡ್ಡಿ ಮಾತನಾಡಿ, ಅಲೀಪುರದಲ್ಲಿ ಕೋವಿಡ್– 19 ಪ್ರಕರಣ ದೃಢಪಟ್ಟಿದ್ದು, ಇವರೆಲ್ಲರಿಗೂ ಸ್ಥಳೀಯ ಖಾಸಗೀ‌ ಆಸ್ಪತ್ರೆಯಲ್ಲಿ ನಿರ್ಮಿಸಿರುವ ಕೋವಿಡ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಈಗ ರೋಗ ಲಕ್ಷಣಗಳು ಇಲ್ಲದ ಕಾರಣ ಅವರನ್ನು ಆಸ್ಪತ್ರೆಯಿಂದ ‌ಬಿಡುಗಡೆ ಮಾಡಲಾಗಿದೆ
ಎಂದು ಹೇಳಿದರು.

ಅಂಜುಮನಿ ಜಾಪ್ರಿಯಾ ಸಮಿತಿಯ ಅಧ್ಯಕ್ಷ ಹಾಷಿಮಿ ರಜಾ ಮಾತನಾಡಿ, ಕೊರೊನಾ ದೃಢವಾದ ಎಲ್ಲರನ್ನು ಕೋವಿಡ್ ಕೇಂದ್ರದಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಎಲ್ಲರೂ ಆರೋಗ್ಯದಿಂದ ಇದ್ದು, ಮುನ್ನೆಚ್ಚರಿಕಾ ‌ಕ್ರಮಗಳನ್ನು ಪಾಲಿಸುತ್ತಿದ್ದಾರೆ. ಆರೋಗ್ಯ ಅಧಿಕಾರಿಗಳ ಸಲಹೆ ಸೂಚನೆಗಳನ್ನು ತಪ್ಪದೆ ಪಾಲನೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುತ್ತೇವೆ ಎಂದರು.

ನಂತರ‌ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ‌ಹೊರ ಬಂದ ಎಲ್ಲರಿಗೂ ಪುಷ್ಪಾರ್ಚನೆ ಮೂಲಕ ಸ್ವಾಗತಿಸಲಾಯಿತು.

ಕಂದಾಯ ನಿರೀಕ್ಷಕ ಜಯಪ್ರಕಾಶ್, ಪಿಡಿಒ ಆರ್.ಎನ್.ಸಿದ್ಧರಾಮಯ್ಯ, ಪಿಎಸೈ ಲಕ್ಷ್ಮಿನಾರಾಯಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT