ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರಂಟೈನ್ ನಾಗರಿಕರಿಗೆ ಅಗತ್ಯ ಸೌಲಭ್ಯ

ನಗರದ ಪರಿಶಿಷ್ಟ ಜಾತಿಯ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ಕ್ವಾರಂಟೈನ್
Last Updated 24 ಮೇ 2020, 17:03 IST
ಅಕ್ಷರ ಗಾತ್ರ

ಚಿಂತಾಮಣಿ: ಕ್ವಾರಂಟೈನ್‌ನಲ್ಲಿ ಇರುವ ಜನರಿಗೆ ಅಗತ್ಯ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ತಹಶೀಲ್ದಾರ್ ಡಿ.ಹನುಮಂತರಾಯಪ್ಪ ತಿಳಿಸಿದರು.

ತಾಲ್ಲೂಕು ಕಚೇರಿಯಲ್ಲಿ ಭಾನುವಾರ ನಡೆದ ಟಾಸ್ಕ್‌ಫೋರ್ಸ್ ಸಮಿತಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನಗರದ ಪರಿಶಿಷ್ಟ ಜಾತಿಯ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಸರ್ಕಾರದ ಮಾರ್ಗಸೂಚನೆಯಂತೆ ಊಟ ತಿಂಡಿ, ಕಾಫಿ, ಟೀ, ಪ್ರತಿದಿನ ಬೇರೆ ಬೇರೆ ರೀತಿಯ ಆಹಾರ ನೀಡಲಾಗುತ್ತಿದೆ. ವೈದ್ಯಾಧಿಕಾರಿಗಳು ನಿತ್ಯ ಅಗತ್ಯ ತಪಾಸಣೆ ನಡೆಸುತ್ತಿದ್ದಾರೆ. ಕ್ವಾರಂಟೈನ್‌ನಲ್ಲಿ ಇರುವವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು.

ನಗರದಲ್ಲಿ ಕೋವಿಡ್ ಪ್ರಕರಣದಿಂದ ಸೀಲ್‌ಡೌನ್ ಮಾಡಿದ್ದ 9ನೇ ವಾರ್ಡ್‌ನಲ್ಲೂ ನಾಗರಿಕರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಹಾಲು, ತರಕಾರಿ, ದಿನಸಿ, ಔಷಧಿಗಳನ್ನು ಮನೆ ಬಾಗಿಲಿಗೆ ಸ್ವಯಂಸೇವಕರ ಮೂಲಕ ಒದಗಿಸಲಾಗುತ್ತಿದೆ. ವೈದ್ಯಾಧಿಕಾರಿಗಳು ಕಾಲ ಕಾಲಕ್ಕೆ ತಪಾಸಣೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ನಗರದ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯದಲ್ಲಿ ಆಶ್ರಯ ಪಡೆದಿದ್ದ ಭಿಕ್ಷುಕರನ್ನು ಅವರ ಇಚ್ಚೆಯಂತೆ ಸ್ವಂತ
ಸ್ಥಳಗಳಿಗೆ ಕಳುಹಿಸಿಕೊಡಲಾಗಿದೆ. ಅವರಿಗೂ ಸಮರ್ಪಕವಾಗಿ
ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಅಂತರ ರಾಜ್ಯ ವಲಸೆ ಕಾರ್ಮಿಕರನ್ನು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಿ ಅವರ ರಾಜ್ಯಗಳಿಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದರು.

ತಾಲ್ಲೂಕಿನ ಚಿಲಕಲನೇರ್ಪು, ಅಂಕಾಲಮಡುಗು, ಕಂಬಾಲಪಲ್ಲಿಗಳ ಚೆಕ್ ಪೋಸ್ಟ್‌ಗಳಲ್ಲಿ ವಲಸೆ ಜನರನ್ನು ನಿಯಂತ್ರಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಥಾಪಿಸಿದ್ದ ಮರಿನಾಯಕನಹಳ್ಳಿ ಮತ್ತು ಕೊಡದವಾಡಿ ಚೆಕ್ ಪೋಸ್ಟ್‌ಗಳಲ್ಲಿ ಸ್ವಲ್ಪಮಟ್ಟಿನ ಸಡಿಲಿಕೆ ಮಾಡಲಾಗಿದೆ. ಸಾರ್ವಜನಿಕರ ಸಹಕಾರವೂ ದೊರೆತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT