ಶುಕ್ರವಾರ, ಜುಲೈ 23, 2021
23 °C

ಕೋವಿಡ್‌: ಸೋಂಕಿತರು 143ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಜಿಲ್ಲೆಗೆ ಇತ್ತೀಚೆಗೆ ಮಹಾರಾಷ್ಟ್ರದಿಂದ ವಾಪಾಸಾಗಿರುವ ಕಾರ್ಮಿಕರ ಪೈಕಿ ಮತ್ತೆ ಇಬ್ಬರಿಗೆ ಕೋವಿಡ್‌ 19 ಇರುವುದು ಮಂಗಳವಾರ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ.

ಜಿಲ್ಲೆಗೆ ಮುಂಬೈನಿಂದ ವಾಪಾಸಾಗಿರುವ 316 ಕಾರ್ಮಿಕರ ಪೈಕಿ ಈವರೆಗೆ 114 ಜನರಲ್ಲಿ ಕೋವಿಡ್‌ ಇರುವುದು ಪತ್ತೆಯಾಗಿದೆ. ಮಂಗಳವಾರ ಬಾಗೇಪಲ್ಲಿಯ 12 ವರ್ಷದ ಬಾಲಕಿ ಮತ್ತು ಗೌರಿಬಿದನೂರು ತಾಲ್ಲೂಕಿನ 36 ವರ್ಷದ ವ್ಯಕ್ತಿಯಲ್ಲಿ ಕೋವಿಡ್‌ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಈವರೆಗೆ ವಿವಿಧ ತಾಲ್ಲೂಕುಗಳಲ್ಲಿ 29 ಪ್ರಕರಣಗಳು ವರದಿಯಾಗಿದ್ದು ಜತೆಗೆ ಮಹಾರಾಷ್ಟ್ರದಿಂದ ವಾಪಾಸಾದವರ ಪೈಕಿ 114 ಮಂದಿಯಲ್ಲಿ ಸೋಂಕು ಪತ್ತೆಯಾಗಿ ಸೋಂಕಿತರ ಸಂಖ್ಯೆ 143ಕ್ಕೆ ಏರಿದೆ. ಸೋಂಕಿತರ ಪೈಕಿ ಚಿಕ್ಕಬಳ್ಳಾಪುರದ ಇಬ್ಬರು, ಗೌರಿಬಿದನೂರಿನ ಒಬ್ಬರು ಮೃತಪಟ್ಟಿದ್ದು, ಈವರೆಗೆ 39 ಜನರು ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲಾ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ 101 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರದವರೆಗೆ ಜಿಲ್ಲೆಯಲ್ಲಿ 10,721 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಆ ಪೈಕಿ 9,653 ಮಂದಿಯಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ. ಇನ್ನುಳಿದಂತೆ ಗೌರಿಬಿದನೂರಿನ 77, ಬಾಗೇಪಲ್ಲಿಯ 49, ಚಿಕ್ಕಬಳ್ಳಾಪುರದ 11 ಮತ್ತು ಚಿಂತಾಮಣಿಯ 6 ಜನರಲ್ಲಿ ಕೋವಿಡ್ ಇರುವುದು ಪತ್ತೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.