ಬುಧವಾರ, ಏಪ್ರಿಲ್ 14, 2021
32 °C

ಒಂದೇ ದಿನ 31 ಮಂದಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ಏಕಾಏಕಿ ಕೊರೊನಾ ಸೋಂಕಿತರು ಹೆಚ್ಚಿದ್ದಾರೆ. ಒಂದೇ ದಿನ 31 ಮಂದಿಗೆ ಸೋಂಕಿಗೆ ತುತ್ತಾಗಿದ್ದಾರೆ. ಹಲವು ತಿಂಗಳುಗಳ ನಂತರ ಹೀಗೆ ದಿಢೀರ್ ಹೆಚ್ಚಳವನ್ನು ಜಿಲ್ಲೆ ಕಂಡಿದೆ. ಸಕ್ರಿಯ ಸೋಂಕಿತರ ಸಂಖ್ಯೆ 112ಕ್ಕೆ ತಲುಪಿದೆ.

ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 13, ಬಾಗೇಪಲ್ಲಿಯಲ್ಲಿ ಇಬ್ಬರು, ಚಿಂತಾಮಣಿ ಒಂಬತ್ತು, ಗೌರಿಬಿದನೂರು ಆರು ಮತ್ತು ಶಿಡ್ಲಘಟ್ಟ ತಾಲ್ಲೂಕಿನ ಒಬ್ಬರಿಗೆ ಸೋಂಕು ದೃಢವಾಗಿದೆ. ಇದೇ ದಿನ 12 ರೋಗಿಗಳು ಗುಣವಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 14,146 ಮಂದಿಗೆ ಕೊರೊನಾ ಸೋಂಕು ತಗುಲಿದ್ದು 13,915 ಮಂದಿ ಗುಣವಾಗಿದ್ದಾರೆ. 118 ರೋಗಿಗಳು ಮೃತಪಟ್ಟಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು