ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆರೇಸಂದ್ರದಲ್ಲಿ ಕೋವಿಡ್ ಅರಿವು ಕಾರ್ಯಕ್ರಮ

Last Updated 8 ಅಕ್ಟೋಬರ್ 2021, 6:29 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಪೆರೇಸಂದ್ರದಲ್ಲಿ ಗುರುವಾರ ಪ್ರಗತಿ ಟ್ರೇಡರ್ಸ್, ಜೆವೈ ಎಲೆಕ್ಟ್ರಿಕಲ್ಸ್ ಮತ್ತಿತರ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಕೋವಿಡ್ ಅರಿವು ಕಾರ್ಯಕ್ರಮ ನಡೆಯಿತು.

ಆರೋಗ್ಯ ಸೇತು ಆ್ಯಪ್ ಬಗ್ಗೆ ಅರಿವು ಮೂಡಿಸಲಾಯಿತು. ಮುಖಂಡರಾದ ಪಿ.ಎನ್. ಚನ್ನಕೃಷ್ಣ ರೆಡ್ಡಿ, ವಕೀಲ ಪ್ರಕಾಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

‘ಮನೆ ಬಾಗಿಲಿಗೆ ಉಚಿತ ನೈರ್ಮಲ್ಯ ಯೋಜನೆ’ಯಡಿಯಲ್ಲಿ ಪ್ರತಿ ಮನೆ ಬಾಗಿಲಿಗೆ ಉಚಿತವಾಗಿ ಸ್ಯಾನಿಟೈಸರ್ ನೀಡಲಾಯಿತು. ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಯಿತು. ಗ್ರಾಮದಲ್ಲಿ ಮನೆಗಳ ಬಳಿ ಸೋಂಕು ನಿವಾರಕ ಸಿಂಪಡಿಸಲಾಯಿತು.

ಕೋವಿಡ್ ಸೋಂಕು ರಾಜ್ಯದಲ್ಲಿ ಕಡಿಮೆ ಆಗುತ್ತಿದೆ. ಸೋಂಕು ಮತ್ತೆ ಹೆಚ್ಚಬಾರದು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಗಣ್ಯರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT