ಸೋಮವಾರ, ಜುಲೈ 26, 2021
21 °C

ತಿಂಗಳಲ್ಲಿ ಕೋವಿಡ್‌ ಕಾಳಜಿ ಕೇಂದ್ರ: ಸಚಿವ ಡಾ.ಕೆ.ಸುಧಾಕರ್ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ರಾಜ್ಯದಲ್ಲಿ ಒಂದು ತಿಂಗಳ ಒಳಗೆ 25 ಸಾವಿರ ಹಾಸಿಗೆಗಳ ಕೋವಿಡ್‌ 19 ಕಾಳಜಿ ಕೇಂದ್ರಗಳನ್ನು ತೆರೆಯಲು ಎಲ್ಲ ವ್ಯವಸ್ಥೆ ಸಿದ್ಧವಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಅಧಿಕಾರಿಗಳು ಕಳೆದ ಎರಡ್ಮೂರು ದಿನಗಳಲ್ಲಿ ಜಾಗಗಳನ್ನು ಗುರುತಿಸುವ ಕೆಲಸ ಮಾಡಿದ್ದಾರೆ. ಈಗಾಗಲೇ 2,000 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಶೀಘ್ರದಲ್ಲಿಯೇ ಎಲ್ಲೆಲ್ಲಿ ಕೋವಿಡ್ ಕಾಳಜಿ ಕೇಂದ್ರಗಳು ಇರಲಿವೆ ಎಂಬ ಬಗ್ಗೆ ಸರ್ಕಾರ ಅಧಿಸೂಚನೆ ಪ್ರಕಟವಾಗಲಿದೆ’ ಎಂದು ತಿಳಿಸಿದರು.

‘ಕೋವಿಡ್ 19 ಲಕ್ಷಣ ಇರದಿದ್ದರೂ ಸೋಂಕಿತರಾದವರನ್ನು ಕೋವಿಡ್‌ ಕಾಳಜಿ ಕೇಂದ್ರದಲ್ಲಿ ಪ್ರತ್ಯೇಕವಾಗಿಟ್ಟು ನಿಗಾ ಇಡಲಾಗುತ್ತದೆ. ಚಿಕಿತ್ಸೆಯ ಅಗತ್ಯ ಬಿದ್ದರೆ ಮಾತ್ರ ಅಂತಹವರನ್ನು ತಕ್ಷಣ ಆಸ್ಪತ್ರೆಗೆ ರವಾನಿಸಲಾಗುತ್ತದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಇರುವ 36 ಸೋಂಕಿತರ ಸ್ಥಿತಿ ಸ್ವಲ್ಪ ಗಂಭೀರವಾಗಿದೆ. ಆ ಪೈಕಿ ಕೆಲವರು ಮೃತಪಟ್ಟಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು