ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಘಟ್ಟದಲ್ಲಿ ಕೋವಿಡ್ ಪ್ರಕರಣ ಪತ್ತೆ:ಕೋವಿಡ್ ಮಾರ್ಗಸೂಚಿ ಪಾಲಿಸಿ–ತಹಶೀಲ್ದಾರ್

ಕೋವಿಡ್ ಮಾರ್ಗಸೂಚಿ ಪಾಲಿಸಲು ತಹಶೀಲ್ದಾರ್ ಬಿ.ಎನ್.ಸ್ವಾಮಿ ಮನವಿ
Published 31 ಡಿಸೆಂಬರ್ 2023, 14:09 IST
Last Updated 31 ಡಿಸೆಂಬರ್ 2023, 14:09 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ತಾಲ್ಲೂಕಿನಲ್ಲಿ 9 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ನಾಗರಿಕರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸೋಂಕು ನಿಯಂತ್ರಿಸಲು ಸಹಕರಿಸಬೇಕು ಎಂದು ತಹಶೀಲ್ದಾರ್ ಬಿ.ಎನ್. ಸ್ವಾಮಿ ಮನವಿ ಮಾಡಿದರು.

ನಗರದ ತಾಲ್ಲೂಕು ಕಚೇರಿಯ ಮುಂಭಾಗ ಶನಿವಾರ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕುರಿತು ಜನಜಾಗೃತಿ ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿ, ಸರ್ಕಾರದ ಕೋವಿಡ್ ಮಾರ್ಗಸೂಚಿಗಳಂತೆ 60 ವರ್ಷ ಮೇಲ್ಪಟ್ಟ ನಾಗರಿಕರು ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಸಿಂಪಡಿಸಿಕೊಂಡು, ಅಂತರ ಕಾಯ್ದುಕೊಳ್ಳಬೇಕೆಂದು ಹೇಳಿದರು.

ತಾಲ್ಲೂಕಿನಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಆರೋಗ್ಯ ಇಲಾಖೆಯ ಮೂಲಕ ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕಿತರಿಗೆ ನಿಗದಿಪಡಿಸಿದ ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆಗಳೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾಗರಿಕರು ಆತಂಕಗೊಳ್ಳುವ ಅಗತ್ಯ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಿದರು.

ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT