ಚಿಕ್ಕಬಳ್ಳಾಪುರ: ‘ಕೋವಿಡ್ ಸಮಯದಲ್ಲಿ ನಾನು ತಪ್ಪು ಮಾಡಿದ್ದೇನೆ ಎನ್ನುವುದು ಕೇವಲ ರಾಜಕೀಯ ಅಪಪ್ರಚಾರ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾನು ತಂದ ಯೋಜನೆಗಳನ್ನೇ ಈಗಿನ ಸರ್ಕಾರ ಮುಂದುವರಿಸಿದೆ’ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.

ಲೋಕಸಭಾ ಕ್ಷೇತ್ರದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ನೆಲಮಂಗಲದ ವಿವಿಧ ಕಡೆಗಳಿಗೆ ಗುರುವಾರ ಪ್ರವಾಸ ನಡೆಸಿದ ಅವರು ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಒಂದು ವರ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇದೆ. ಕೋವಿಡ್ ಸಮಯದಲ್ಲಿ ತಪ್ಪಾಗಿದ್ದರೆ ಕ್ರಮ ಕೈಗೊಳ್ಳಬೇಕಿತ್ತು. ಇದು ರಾಜಕೀಯ ಅಪಪ್ರಚಾರ. ಇದಕ್ಕೆ ಅಂಜುವುದಿಲ್ಲ. ನಾನು ಆರೋಗ್ಯ ಸಚಿವನಾಗಿದ್ದಾಗ ಜಾರಿಯಾದ ಯೋಜನೆಗಳನ್ನು ಈಗಿನ ಸರ್ಕಾರ ಮುಂದುವರಿಸಿದೆ’ ಎಂದರು.

ಡಯಾಲಿಸಿಸ್ ಸೈಕಲ್ ದುಪ್ಪಟ್ಟು, ನಮ್ಮ ಕ್ಲಿನಿಕ್, ನೇತ್ರ ಚಿಕಿತ್ಸೆ ಮೊದಲಾದ ಯೋಜನೆಗಳನ್ನು ಈಗಿನ ಸರ್ಕಾರ ಮುಂದುವರಿಸಿದೆ. ಪ್ರತಿ ಜಿಲ್ಲಾಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಸಿಗೆಗಳನ್ನು ಹೆಚ್ಚಿಸಲಾಗಿದೆ. ನಾನು ಆರೋಗ್ಯ ಸಚಿವನಾಗಿ ಕೆಲಸ ಮಾಡಿದ್ದಕ್ಕೆ ತೃಪ್ತಿ ಇದೆ. ಯಾರಿಗಾದರೂ ಅನುಮಾನವಿದ್ದರೆ ರಸ್ತೆಯಲ್ಲಿ ಫಲಕ ಹಿಡಿಯದೆ ತನಿಖಾ ಸಂಸ್ಥೆಗಳಿಗೆ ಮಾಹಿತಿ ನೀಡಿ. ತಪ್ಪಿದ್ದರೆ ಶಿಕ್ಷೆ ಎದುರಿಸುತ್ತೇನೆ. ನಾನು ಅಂತಹ ಪಾಪದ ಕೆಲಸ ಮಾಡಿಲ್ಲ ಎಂದರು.

ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ನೆಲಮಂಗಲಕ್ಕೆ ಈಗಾಗಲೇ ಭೇಟಿ ನೀಡಿದ್ದು, ಇನ್ನೂ ಯಲಹಂಕ ಮತ್ತು ಗೌರಿಬಿದನೂರಿಗೆ ಭೇಟಿ ನೀಡಬೇಕಿದೆ. ಭೇಟಿ ನೀಡಿದ ಕಡೆಗಳಲ್ಲಿ ಬಿಜೆಪಿ ನಾಯಕರು ಹಾಗೂ ಜೆಡಿಎಸ್ ಮುಖಂಡರು ಉತ್ತಮ ಸಹಕಾರ ನೀಡುತ್ತಿದ್ದಾರೆ. ವಿಧಾನಸಭಾ ಚುನಾವಣೆಗೂ ಈ ಚುನಾವಣೆಗೂ ವಾತಾವರಣದಲ್ಲಿ ಬಹಳ ವ್ಯತ್ಯಾಸವಿದೆ. ಎಲ್ಲರೂ ಕುಟುಂಬದ ಸದಸ್ಯರಾಗಿದ್ದು, ಅವರು ಕೇಳುವ ಪ್ರಶ್ನೆಗೆ ಉತ್ತರ ನೀಡುವುದು ನನ್ನ ಕರ್ತವ್ಯ. ಕೆಲವರು ಆಗಿರದ ಕೆಲಸಗಳ ಬಗ್ಗೆ ಪ್ರಶ್ನೆ ಕೇಳುತ್ತಾರೆ. ಇವೆಲ್ಲವನ್ನೂ ಮೀರಿ ನಾವು ಚುನಾವಣೆ ಎದುರಿಸುತ್ತಿದ್ದೇವೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಮುಂದೆ ಬೇರೆಯವರಿಗೂ ಅವಕಾಶ ಸಿಗಬಹುದು. ಯಾರೂ ಭಿನ್ನವಾಗಿ ಮಾತನಾಡದೆ ಮೋದಿಯವರನ್ನು ಗೆಲ್ಲಿಸೋಣ ಎಂದರು.

ಮಠಗಳಿಗೆ ಭೇಟಿ

ಸುಧಾಕರ್ ಟಿಕೆಟ್ ಘೋಷಣೆಯಾದ ತರುವಾಯ ಜೆಡಿಎಸ್ ಮತ್ತು ಬಿಜೆಪಿ ನಾಯಕರನ್ನು ಭೇಟಿ ಆಗುತ್ತಿದ್ದರು. ಈಗ ಮಠಾಧೀಶರನ್ನು ಭೇಟಿ ಆಗುತ್ತಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠ ನೆಲಮಂಗಲ ತಾಲೂಕಿನ ಮೇಲಣಗವಿ ವೀರ ಮಠ ಹೊನ್ನಮ್ಮಗವಿ ಮಠ ಶಿವಗಂಗೆ ಕ್ಷೇತ್ರ ಕಂಬಾಳು ಸಂಸ್ಥಾನ ಮಠ ನೆಲಮಂಗಲದ ಪವಾಡ ಬಸವಣ್ಣ ದೇವರ ಮಠಕ್ಕೆ ಭೇಟಿ ನೀಡಿಸ್ವಾಮೀಜಿಗಳ ಆಶೀರ್ವಾದ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.