ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಸೋಂಕಿತ ವೃದ್ಧೆ ಸಾವು

Last Updated 2 ಜುಲೈ 2020, 15:06 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗುರುವಾರ ಚಿಕ್ಕಬಳ್ಳಾಪುರ ನಗರದಲ್ಲಿ ಒಂದು ಕೋವಿಡ್‌ ಪ್ರಕರಣ ವರದಿಯಾಗಿದ್ದು, ಶಿಡ್ಲಘಟ್ಟದಲ್ಲಿ ಕೋವಿಡ್‌ ಸೋಂಕಿತ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

ಕೋವಿಡ್‌ಗೆ ತುತ್ತಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕ್ಯಾನ್ಸರ್ ಪೀಡಿತ ವೃದ್ದೆಯೊಬ್ಬರು ಗುರುವಾರ ಬೆಳಗಿನ ಜಾವ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಜೂನ್ 20 ರಂದು ವೃದ್ಧೆಗೆ ಕೋವಿಡ್ ಇರುವುದು ದೃಢಪಟ್ಟಿತ್ತು. ಆರೋಗ್ಯ ಇಲಾಖೆ ಸಿಬ್ಬಂದಿ ಅವರ ಕುಟುಂಬದ ಸದಸ್ಯರ ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆಸಿದ್ದು, ಯಾರಲ್ಲಿಯೂ ಕೋವಿಡ್‌ ಸೋಂಕು ಪತ್ತೆಯಾಗಿಲ್ಲ

ಜಿಲ್ಲೆಯಲ್ಲಿ ಈವರೆಗೆ 230 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 54, ಬಾಗೇಪಲ್ಲಿ 53, ಚಿಂತಾಮಣಿ 16, ಗೌರಿಬಿದನೂರು 96, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 11 ಜನರಿಗೆ ಕೋವಿಡ್ ಸೋಂಕಿದೆ.

ಸೋಂಕಿತರ ಪೈಕಿ ನಾಲ್ಕು ಮಂದಿ ಕೋವಿಡ್‌ನಿಂದ, ಇಬ್ಬರು ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ಧಾರೆ. ಚಿಕಿತ್ಸೆಯಿಂದ 171 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್‌ ವಾರ್ಡ್‌ನಲ್ಲಿ 52 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT