ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶನಿವಾರ ಎರಡು ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 160ಕ್ಕೆ ಏರಿಕೆಯಾಗಿದೆ.

ಶನಿವಾರ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ 23 ವರ್ಷ ಮತ್ತು 17 ವರ್ಷದ ಇಬ್ಬರು ಯುವಕರಲ್ಲಿ ಕೋವಿಡ್ ಇರುವುದು ಪತ್ತೆಯಾಗಿದೆ.

ಪ್ರಸ್ತುತ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ 8 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರದವರೆಗೆ ಜಿಲ್ಲೆಯಲ್ಲಿ 13,195 ಜನರ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆ ಪೈಕಿ 12,567ಮಂದಿಯಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ.

ಮುಂಬೈನಿಂದ ಜಿಲ್ಲೆಗೆ ವಾಪಾಸದವರ 388 ಜನರ ಪೈಕಿ ಈವರೆಗೆ 122 ಜನರಲ್ಲಿ ಕೋವಿಡ್ ಇರುವುದು ದೃಢಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.