ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ | ಕೋವಿಡ್‌ ಸೋಂಕಿತರ ಸಂಖ್ಯೆ 148ಕ್ಕೆ ಏರಿಕೆ

Last Updated 4 ಜೂನ್ 2020, 16:23 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಗೆ ಇತ್ತೀಚೆಗೆ ಮಹಾರಾಷ್ಟ್ರದಿಂದ ವಾಪಾಸಾಗಿರುವ ಕಾರ್ಮಿಕರ ಪೈಕಿ ಮತ್ತೆ ಐದು ಕೋವಿಡ್‌ 19 ಇರುವುದು ಗುರುವಾರ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 148ಕ್ಕೆ ಏರಿಕೆಯಾಗಿದೆ.

ಜಿಲ್ಲೆಗೆ ಮುಂಬೈನಿಂದ ವಾಪಾಸಾಗಿರುವ 316 ಕಾರ್ಮಿಕರ ಪೈಕಿ ಈವರೆಗೆ 114 ಜನರಲ್ಲಿ ಕೋವಿಡ್‌ ಇರುವುದು ಪತ್ತೆಯಾಗಿತ್ತು. ಗುರುವಾರ ಗೌರಿಬಿದನೂರು ತಾಲ್ಲೂಕಿನ ಐದು ಜನರಲ್ಲಿ ಪುನಃ ಕೋವಿಡ್‌ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಈವರೆಗೆ ವಿವಿಧ ತಾಲ್ಲೂಕುಗಳಲ್ಲಿ 29 ಪ್ರಕರಣಗಳು ವರದಿಯಾಗಿದ್ದು ಜತೆಗೆ ಮಹಾರಾಷ್ಟ್ರದಿಂದ ವಾಪಾಸಾದವರ ಪೈಕಿ 119 ಮಂದಿಯಲ್ಲಿ ಸೋಂಕು ಪತ್ತೆಯಾಗಿ, ಸೋಂಕಿತರ ಸಂಖ್ಯೆ 148ಕ್ಕೆ ಏರಿದೆ. ಸೋಂಕಿತರ ಪೈಕಿ ಚಿಕ್ಕಬಳ್ಳಾಪುರದ ಇಬ್ಬರು, ಗೌರಿಬಿದನೂರಿನ ಒಬ್ಬರು ಮೃತಪಟ್ಟಿದ್ದು, ಈವರೆಗೆ 52 ಜನರು ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ.

ಪ್ರಸ್ತುತ ಜಿಲ್ಲಾ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ 93 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರದವರೆಗೆ ಜಿಲ್ಲೆಯಲ್ಲಿ 11,099 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಆ ಪೈಕಿ 10,070 ಮಂದಿಯಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ. ಇನ್ನುಳಿದಂತೆ ಗೌರಿಬಿದನೂರಿನ 82, ಬಾಗೇಪಲ್ಲಿಯ 49, ಚಿಕ್ಕಬಳ್ಳಾಪುರದ 11 ಮತ್ತು ಚಿಂತಾಮಣಿಯ 6 ಜನರಲ್ಲಿ ಕೋವಿಡ್ ಇರುವುದು ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT