ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆ

Last Updated 25 ಜೂನ್ 2020, 16:16 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗುರುವಾರ ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿಯ ತಲಾ ಒಬ್ಬರಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆಯಾಗಿದೆ.

ಗುರುವಾರ ಚಿಕ್ಕಬಳ್ಳಾಪುರದಲ್ಲಿ 9 ವರ್ಷದ ಬಾಲಕಿಗೆ ಮತ್ತು ಚಿಂತಾಮಣಿಯ 30 ವರ್ಷದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ಇರುವುದು ಪತ್ತೆಯಾಗಿದೆ.

ಈವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 21, ಬಾಗೇಪಲ್ಲಿ 53, ಚಿಂತಾಮಣಿ 14, ಗೌರಿಬಿದನೂರು 85, ಶಿಡ್ಲಘಟ್ಟ 9 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಪ್ರಸ್ತುತ ಜಿಲ್ಲಾ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ 32 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT