ಭಾನುವಾರ, ಮೇ 16, 2021
22 °C
715ಕ್ಕೆ ಏರಿದ ಸೋಂಕಿತರ ಸಂಖ್ಯೆ

ಚಿಕ್ಕಬಳ್ಳಾಪುರ | ಒಂದೇ ದಿನ 107 ಮಂದಿಗೆ ಕೋವಿಡ್

ಪ‍್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್‌ ಪ್ರಕರಣಗಳು ಆಸ್ಫೋಟಗೊಳ್ಳುತ್ತಿದ್ದು, ಶನಿವಾರ ಒಂದೇ ದಿನ 107 ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 715ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಶನಿವಾರ ಚಿಕ್ಕಬಳ್ಳಾಪುರದ ಕೆಎಎಸ್‌ಆರ್‌ಟಿಸಿ ಡಿಪೊ ಮತ್ತು ಬಾಗೇಪಲ್ಲಿ ಬೆಸ್ಕಾಂ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಕೋವಿಡ್‌ ತಗುಲಿರುವುದು ಪತ್ತೆಯಾಗಿದೆ.

ಜಿಲ್ಲಾಡಳಿತ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಿ ಕೋವಿಡ್‌ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದರೂ ಪ್ರಕರಣಗಳ ಸಂಖ್ಯೆಗಳು ಮಾತ್ರ ದಿನೇ ದಿನೇ ಏರುಮುಖವಾಗುತ್ತಿರುವುದು ಸಮುದಾಯದಲ್ಲಿ ಸೋಂಕು ಹರಡಿರುವ ಶಂಕೆಗೆ ಎಡೆ ಮಾಡಿದೆ.

ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಪ್ರಕರಣಗಳ ಸಂಖ್ಯೆ ಕಳವಳಕಾರಿ ರೀತಿ ಏರಿಕೆಯಾಗುತ್ತಿದ್ದು, ಶನಿವಾರದ ಹೊತ್ತಿಗೆ 253 ಪ್ರಕರಣಗಳು ವರದಿಯಾಗಿವೆ.

ಸದ್ಯ ಜಿಲ್ಲೆಯಲ್ಲಿ 715 ಸೋಂಕಿತರ ಪೈಕಿ 340 ಜನರು ಚಿಕಿತ್ಸೆಯಿಂದ ಗುಣಮುಖರಾಗಿದ್ದು, 20 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 355 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು