ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಸುರಕ್ಷತಾ ಕ್ರಮ ತಪ್ಪದೆ ಪಾಲಿಸಿ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೂಚನೆ

ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಲು
Last Updated 20 ಫೆಬ್ರುವರಿ 2021, 5:36 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಸಾರ್ವಜನಿಕರು ಕೋವಿಡ್‌ ಸುರಕ್ಷತಾ ಕ್ರಮಗಳನ್ನು ತಪ್ಪದೆ ಪಾಲಿಸಬೇಕು. ಕೇರಳ, ಮಹಾರಾಷ್ಟ್ರದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲು
ಸೂಚಿಸಲಾಗಿದೆ. ಇನ್ನಷ್ಟು ಕ್ರಮ ಕೈಗೊಳ್ಳುವ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಪ್ರಧಾನಿ ನರೇಂದ್ರ ಮೋದಿಯವರು ಉಚಿತವಾಗಿ ಲಸಿಕೆ ನೀಡುತ್ತಿದ್ದಾರೆ. ಇದನ್ನು ಸದುಪಯೋಪಡಿಸಿಕೊಳ್ಳಬೇಕು’ ಎಂದು ಹೇಳಿದರು.

ಜಾತಿ ಮೀಸಲಾತಿ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಕಾನೂನಿನ ಚೌಕಟ್ಟು, ಸಾಂವಿಧಾನಿಕ ಆಶಯಗಳು ಮತ್ತು ಬೇಡಿಕೆಗಳು ಇವೆಲ್ಲವನ್ನೂ ಸಮತೋಲನದಿಂದ ವೈಜಾನಿಕವಾಗಿ ಪರಾಮರ್ಶಿಸಿ, ಸಾಧ್ಯಾಸಾಧ್ಯತೆಗಳನ್ನು ಪರಿಗಣಿಸಿ ಒಂದು ಅಂತಿಮ ರೂಪ ನೀಡುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ’ ಎಂದರು.

ವೇತನ, ಬಡ್ತಿ ಕಡಿತ ಮಾಡಿಲ್ಲ: ನಂತರ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಕಳೆದ ಒಂದು ವರ್ಷದಲ್ಲಿ ಬೇರೆ ರಾಜ್ಯಗಳಂತೆ ಸರ್ಕಾರಿ ನೌಕರರಿಗೆ ವೇತನ ಕಡಿತ, ಬಡ್ತಿ ಕಡಿತ ಮಾಡಿಲ್ಲ.ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡರೂ ವೇತನ ಕಡಿತಗೊಳಿಸಲಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಅನೇಕ ಇಲಾಖೆಗಳ ನೌಕರರು ಸರ್ಕಾರದೊಂದಿಗೆ ಕೈ ಜೋಡಿಸಿ ಸೇವೆ ಮಾಡಿದ್ದಾರೆ. ಇದರಿಂದಾಗಿ ಕೋವಿಡ್ ಅನ್ನು ಯಶಸ್ವಿಯಾಗಿ ನಿಯಂತ್ರಿಸಲು ಸಾಧ್ಯವಾಗಿದೆ’ ಎಂದರು.

ದೈಹಿಕ ಆರೋಗ್ಯ ಚೆನ್ನಾಗಿದ್ದರೆ ಮಾತ್ರ ಉತ್ತಮವಾಗಿ ಕೆಲಸ ಮಾಡಬಹುದು. ವರ್ಷದಲ್ಲಿ ಒಮ್ಮೆಯಾದರೂ ನೌಕರರು ಕ್ರೀಡೆ, ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಕ್ರೀಡೆ ಉತ್ತೇಜನಕ್ಕೆ ಜಿಲ್ಲೆಯಲ್ಲಿ ಕ್ರೀಡಾ ವಿಲೇಜ್ ಆರಂಭಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT