ಶನಿವಾರ, ಸೆಪ್ಟೆಂಬರ್ 18, 2021
21 °C

ಮುಖ್ಯಮಂತ್ರಿ ಬದಲಾವಣೆ ಚರ್ಚೆ: 'ಫಲಿತಾಂಶ ಬಂದಾಯ್ತಲ್ಲ'– ಸಿ.ಪಿ.ಯೋಗೇಶ್ವರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ರಿಸಲ್ಟ್ (ಫಲಿತಾಂಶ) ಬಂದಾಯ್ತಲ್ಲ -ಇದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌ ನೀಡಿದ ಪ್ರತಿಕ್ರಿಯೆ.

ತಾಲ್ಲೂಕಿನ ನಂದಿಬೆಟ್ಟಕ್ಕೆ ರೋಪ್ ವೇ ಅಳವಡಿಸುವ ಸಂಬಂಧ ಸ್ಥಳ ಪರಿಶೀಲನೆಗೆ ಬಂದಿರುವ ಸಚಿವರು ಸುದ್ದಿಗಾರರ ಜತೆ ಮಾತನಾಡಿದರು.

ಯಡಿಯೂರಪ್ಪ ಅವರ ಬದಲಾವಣೆಗೆ ಪರೀಕ್ಷೆ ಬರೆದವರು ನೀವು ಎಂದು ಕೇಳಿದ್ದಕ್ಕೆ ಅವರು ಈ ರೀತಿಯಲ್ಲಿ ಪ್ರತಿಕ್ರಿಯಿಸಿದರು.

 ಬಿ.ವೈ.ವಿಜಯೇಂದ್ರ ಅವರು ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಯೋಗೀಶ್ವರ್, ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದರು.

ಮುಖ್ಯಮಂತ್ರಿ ಬದಲಾವಣೆ ಹಾಗೂ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯಿಸಲು ಸ್ಪಷ್ಟವಾಗಿ ನಿರಾಕರಿಸಿದರು. ಹೈಕಮಾಂಡ್ ನೋಡಿಕೊಳ್ಳುತ್ತದೆ, ನನಗೇಗೂ ಗೊತ್ತಿಲ್ಲ ಎಂದರು. ಅಂತಿಮವಾಗಿ ರಿಸಲ್ಟ್ ಬಂದಾಗಿದೆಯಲ್ಲ ಎಂದರು.

ಕುಮಾರಸ್ವಾಮಿ ಅವರು ಬೇಕಾದಾಗ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೆಲಸಗಳನ್ನು ಮಾಡಿಸಿಕೊಳ್ಳುವರು. ನಂತರ ಅವರನ್ನೇ ದೂಷಿಸುವರು ಎಂದರು.

ಇದನ್ನೂ ಓದಿ... ಯೋಗೇಶ್ವರ್‌ಗೆ ಏನು ಮಾತನಾಡಬೇಕು ಎಂಬ ಪರಿಜ್ಞಾನ ಇಲ್ಲ: ಕುಮಾರಸ್ವಾಮಿ ತಿರುಗೇಟು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು