ಶನಿವಾರ, ಮೇ 28, 2022
29 °C

ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಪ್ರಜಾ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹಾಗೂ ಸಿಪಿಎಂ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ (73) ಶುಕ್ರವಾರ ನಿಧನರಾದರು. ಅವರು ಅವಿವಾಹಿತರಾಗಿದ್ದರು. ಚಿಂತಾಮಣಿ ತಾಲ್ಲೂಕಿನ ಬೈರೇಬಂಡ ಗ್ರಾಮದ ಶ್ರೀರಾಮರೆಡ್ಡಿ, ಬಾಗೇಪಲ್ಲಿ ವಿಧಾನ ಸಭಾ ಕ್ಷೇತ್ರದಲ್ಲಿ ರಾಜಕೀಯ ನೆಲೆ ಕಂಡುಕೊಂಡಿದ್ದರು. 

1999 ಮತ್ತು 2004ರಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ಆಯ್ಕೆ ಆಗಿದ್ದರು. ರಾಜ್ಯ ಸಿಪಿಎಂ ಕಾರ್ಯದರ್ಶಿಯೂ ಆಗಿ ಶ್ರೀರಾಮರೆಡ್ಡಿ ಕೆಲಸ ಮಾಡಿದ್ದಾರೆ.  ರಾಜ್ಯದಲ್ಲಿ ರೈತ ಮತ್ತು ಕಾರ್ಮಿಕ ಹೋರಾಟಗಳನ್ನು ಕಟ್ಟುವಲ್ಲಿ ಮಂಚೂಣಿಯಲ್ಲಿ ಇದ್ದರು. 

ಕಳೆದ ವರ್ಷದ ಮೇನಲ್ಲಿ ಕೋವಿಡ್ ತಗುಲಿದ್ದು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಇತ್ತೀಚೆಗೆ ಎರಡು ಮೊಣಕಾಲುಗಳಿಗೆ ಶಸ್ತ್ರಚಿಕಿತ್ಸೆ ನಡೆದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು