ಚಿಕ್ಕಬಳ್ಳಾಪುರ: ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ. ಬಯ್ಯಾರೆಡ್ಡಿ (65) ಶನಿವಾರ ಬೆಳಗಿನ ಜಾವ ನಿಧನರಾದರು.

ಕೆಲವು ವರ್ಷಗಳಿಂದ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆದು ಬೆಂಗಳೂರಿನ ಮನೆಗೆ ಹಿಂದಿರುಗಿದ್ದರು. ಬೆಂಗಳೂರಿನ ಸಿಪಿಎಂ ರಾಜ್ಯ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಬಯ್ಯಾರೆಡ್ಡಿ ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲ್ಲೂಕಿನ ಸ್ವಗ್ರಾಮ ಗಡಿಗವಾರಹಳ್ಳಿಯಲ್ಲಿ ಭಾನುವಾರ ಬೆಳಗ್ಗೆ 10ಕ್ಕೆ ಅಂತ್ಯಕ್ರಿಯೆ ನಡೆಯಲಿದೆ.

ಗಡಿಗವಾರಹಳ್ಳಿ ಚೌಡಪ್ಪ ಬಯ್ಯಾರೆಡ್ಡಿ ಅವರು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಮೂಲಕ ಸಾರ್ವಜನಿಕ ರಂಗ ಪ್ರವೇಶಿಸಿದ್ದರು. ಎಸ್ಎಫ್ಐ ಅವಿಭಜಿತ ಕೋಲಾರ ಜಿಲ್ಲೆಯ ಅಧ್ಯಕ್ಷರಾಗಿ, ನಂತರ ರಾಜ್ಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. 1999ರ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸಿಪಿಎಂನಿಂದ ಸ್ಪರ್ಧಿಸಿದ್ದರು.

ಬಗರ್ ಹುಕುಂ ಸಾಗುವಳಿ ರೈತರ ಹೋರಾಟ, ರೈತರ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಮೀಟರ್ ಅಳವಡಿಕೆ ವಿರೋಧಿ ಚಳವಳಿ, ಬಯಲು ಸೀಮೆಗೆ ಶಾಶ್ವತ ನೀರಾವರಿ ಜಾರಿ ಹೋರಾಟ ಸೇರಿದಂತೆ ರೈತ, ಕಾರ್ಮಿಕ, ದುಡಿಯುವ ವರ್ಗಗಳ ಪರವಾಗಿ ರಾಜ್ಯದಾದ್ಯಂತ ಹೋರಾಟ ರೂಪಿಸುವಲ್ಲಿ ಬಯ್ಯಾರೆಡ್ಡಿ ಪ್ರಮುಖ ಪಾತ್ರವಹಿಸಿದ್ದರು.

ವಿಶೇಷವಾಗಿ ಕೋಲಾರ, ಚಿಕ್ಕ ಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಿಪಿಎಂ ಹಾಗೂ ಅದರ ಅಂಗ ಸಂಸ್ಥೆಗಳು ಸಂಘಟಿಸುತ್ತಿದ್ದ ಹೋರಾಟಗಳ ನಾಯಕತ್ವ ವಹಿಸುತ್ತಿದ್ದರು.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನವದೆಹಲಿಯಲ್ಲಿ ನಡೆದ ರೈತ ಹೋರಾಟದ ವೇಳೆ ರಾಜ್ಯದ ಬಹಳಷ್ಟು ರೈತ ಸಂಘಟನೆಗಳನ್ನು ಒಂದೇ ವೇದಿಕೆಗೆ ತಂದರು. ಈ ‘ಸಂಯುಕ್ತ ಹೋರಾಟ– ಕರ್ನಾಟಕ’ ಸಮಿತಿಯ ಸಂಚಾಲಕರಾಗಿ ಕೆಲಸ ಮಾಡಿದರು.

2017ರಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದರು. ಸೈದ್ಧಾಂತಿಕ ಬದ್ಧತೆಗೆ ಹೆಸರಾದ ಅವರು ತಮ್ಮ ಅನಾರೋಗ್ಯದ ನಡುವೆಯೂ ಚಳವಳಿಗಳಲ್ಲಿ ಭಾಗಿ ಆಗುತ್ತಿದ್ದರು.

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ರೈತರು ಭೂ ಸ್ವಾಧೀನ ವಿರೋಧಿಸಿ ನಡೆಸುತ್ತಿರುವ ಹೋರಾಟದಲ್ಲಿ ಇತ್ತೀಚಿನವರೆಗೂ ಅವರು ಸಕ್ರಿಯವಾಗಿ ದ್ದರು. ಇದು ಅವರ ಹೋರಾಟ ಮನೋಭಾವಕ್ಕೆ ಒಂದು ನಿದರ್ಶನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.