ಶಿಡ್ಲಘಟ್ಟ: ಕನ್ನಡದ ಸಿನಿಮಾಗಳನ್ನು ನೋಡಬೇಕು. ಕನ್ನಡ ಸಾಹಿತ್ಯವನ್ನು ಓದಬೇಕು. ಆ ಮೂಲಕ ಕನ್ನಡ ಭಾಷೆ ಸಾಹಿತ್ಯವನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕಿದೆ ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಬಿ.ವಿ.ರಾಜೀವ್ಗೌಡ ಹೇಳಿದರು.

ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝುನೈದ್ ಖಾನ್ ನಟನೆಯ ಕಲ್ಟ್ ಚಲನ ಚಿತ್ರದ ಪ್ರಚಾರ ಕಾರ್ಯ ಜ.13ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿದ್ದು ಪ್ರಚಾರ ಕಾರ್ಯಕ್ಕೆ ಕೈಗೊಂಡ ಪೂರ್ವ ಸಿದ್ಧತೆಗಳನ್ನು ವೀಕ್ಷಿಸಿ ಮಾತನಾಡಿದರು.

ಸಚಿವ ಜಮೀರ್ ಅಹ್ಮದ್ ಅವರು ಕಾಂಗ್ರೆಸ್ ಪಕ್ಷದ ನಾಯಕರು. ಅವರ ಪುತ್ರ ಝುನೈದ್ ಖಾನ್ ಕನ್ನಡ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿರುವ ಕಲ್ಟ್ ಚಲನಚಿತ್ರ ಜ. 23ರಂದು ರಾಜ್ಯದಾದ್ಯಂತ ಬಿಡುಗಡೆ ಆಗುತ್ತಿದೆ. ಶಿಡ್ಲಘಟ್ಟದಲ್ಲಿ ಜ. 13ರಂದು ಸಂಜೆ 5 ಗಂಟೆಗೆ ನೆಹರೂ ಕ್ರೀಡಾಂಗಣದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ರಮ ನಡೆಯಲಿದೆ ಎಂದರು.

ನಾಯಕ ನಟ, ನಾಯಕಿ ಸೇರಿದಂತೆ ಚಿತ್ರದ ನಟರು, ತಾಂತ್ರಿಕ ಸಿಬ್ಬಂದಿ, ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 10 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾರೆಡ್ಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.