ಶನಿವಾರ, ಅಕ್ಟೋಬರ್ 23, 2021
20 °C

ಚಿಕ್ಕಬಳ್ಳಾಪುರ: ಮಂಚನಬಲೆಯಲ್ಲಿ ಸಾಂಸ್ಕೃತಿಕ ಸುಗ್ಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ತಾಲ್ಲೂಕಿನ ಮಂಚನಬಲೆ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಯಶ್ವಂತ್ ಅಕಾಡೆಮಿಯ ಕಲ್ಚರಲ್ ಫಿಲಂ ಸೈನ್ಸ್‌ ಆ್ಯಂಡ್ ರೀಸರ್ಚ್ ಇನ್‌ಸ್ಟಿಟ್ಯೂಟ್‌ನಿಂದ ಇತ್ತೀಚೆಗೆ ಸಾಂಸ್ಕೃತಿಕ ಸುಗ್ಗಿ ಮತ್ತು ಜಾನಪದ ಮೇಳ ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಅಧ್ಯಕ್ಷ ಆನಂದರೆಡ್ಡಿ, ಸಂಸ್ಥೆಯಿಂದ ಹಳ್ಳಿಯಲ್ಲಿ ಜಾನಪದಕ್ಕೆ ಸಂಬಂಧಿಸಿದ ಕಾರ್ಯಕ್ರಮ ಹಮ್ಮಿಕೊಂಡಿರುವುದು ಒಳ್ಳೆಯ ಬೆಳವಣಿಗೆ. ಜನಪದ ಕಲೆಗಳನ್ನು ಉಳಿಸಿ ಬೆಳೆಸಬೇಕಾದ ತುರ್ತು ಇದೆ ಎಂದು ಹೇಳಿದರು.

ಸಾಂಸ್ಕೃತಿಕ ಸುಗ್ಗಿ ಮತ್ತು ಜಾನಪದ ಮೇಳಗನ್ನು ಹಳ್ಳಿ ಮಟ್ಟದಲ್ಲಿ ಹೆಚ್ಚಾಗಿ ಆಯೋಜಿಸಬೇಕು. ಕೋಲಾಟ, ವೀರಗಾಸೆ, ತಮಟೆ ಮತ್ತಿತರ ಕಲಾ ಪ್ರಕಾರಗಳನ್ನು ಬೆಳೆಸಬೇಕು ಎಂದರು.

ಸಂಸ್ಥೆಯು ಈ ದಿಕ್ಕಿನಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಕಲಾವಿದರಿಗೂ ಇದು ಒಳ್ಳೆಯ ವೇದಿಕೆ ಆಗಲಿದೆ. ಇಂತಹ ಕಾರ್ಯಕ್ರಮಗಳು ಮತ್ತಷ್ಟು ನಡೆಯಲಿ ಎಂದು ಆಶಿಸಿದರು.

ಗ್ರಾಮಾಂತರ ಠಾಣೆಯ ಪಿಎಸ್‌ಐ ಬಿ.ಪಿ. ಮಂಜು, ಸಾಹಿತಿ ಪ್ರೆಸ್ ಸುಬ್ಬರಾಯಪ್ಪ, ಎಎಸ್‌ಐ ವೇಣುಗೋಪಾಲ್ ಅವರನ್ನು ಸನ್ಮಾನಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್. ಶೋಭಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆರ್‌. ಗಾಯತ್ರಮ್ಮ, ಯಶ್ವಂತ್ ಅಕಾಡೆಮಿ ಅಧ್ಯಕ್ಷ ಎಂ. ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ. ಹರೀಶ್, ಸಮತಾ ಸೈನಿಕದಳದ ಜಿಲ್ಲಾ ಅಧ್ಯಕ್ಷ ಜಿ.ಸಿ. ವೆಂಕಟರಮಣಪ್ಪ, ಮುಖ್ಯಶಿಕ್ಷಕಿ ಎಂ.ಆರ್. ರಾಧಾ, ನಗರಸಭಾ ಸದಸ್ಯ ಜೆ. ನಾಗರಾಜ್, ಪಿಡಿಒ ಮಂಜುನಾಥಚಾರಿ, ಸಂಸ್ಥೆಯ ಕಾರ್ಯದರ್ಶಿ ರಾಮಲಕ್ಷ್ಮಮ್ಮ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.