ಶುಕ್ರವಾರ, ಮಾರ್ಚ್ 31, 2023
25 °C
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದ ಡಿಜಿ–ಐಜಿಪಿ ಪ್ರವೀಣ್ ಸೂದ್

ರಾಜ್ಯದಲ್ಲಿ ಡ್ರಗ್ ಮಾಫಿಯಾಗೆ ಕಡಿವಾಣ: ಪ್ರವೀಣ್ ಸೂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ನೀಡಿದ ಮಾಹಿತಿಯನ್ನು ಆಧರಿಸಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಡ್ರಗ್ ಮಾಫಿಯಾಗೆ ಕಡಿವಾಣ ಹಾಕಲಾಗುತ್ತದೆ’ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಪ್ರವೀಣ್ ಸೂದ್ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿ, ಅಧಿಕಾರಿಗಳ ಕಾರ್ಯವೈಖರಿ ಪರಿಶೀಲಿಸಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಸ್ಯಾಂಡಲ್‍ವುಡ್ ಮಾತ್ರವಲ್ಲ. ಎಲ್ಲೂ ಡ್ರಗ್ ದಂಧೆಗೆ ಅವಕಾಶ ಇರಬಾರದು. ಇತ್ತೀಚೆಗೆ ದಂಧೆಕೋರರ ಬಂಧನದಿಂದ ಹಲವು ಮಾಹಿತಿಗಳು ಸಿಕ್ಕಿವೆ. ಅಪರಾಧ ಚಟುವಟಿಕೆಗೆ ಕಡಿವಾಣ ಹಾಕಲು ಹದ್ದಿನ ಕಣ್ಣಿಡಲಾಗಿದೆ. ಅದರಲ್ಲೂ ಶಾಲಾ ಕಾಲೇಜು, ಹೋಟೆಲ್, ರೆಸ್ಟೋರೆಂಟ್ ಸೇರಿ ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ’ ಎಂದು ಹೇಳಿದರು.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಕೇಂದ್ರ ಸರ್ಕಾರದ ಭದ್ರತಾ ಏಜೆನ್ಸಿಯ ಜತೆಗೂಡಿ ಆಂತರಿಕ ಭದ್ರತೆಗೆ ಆದ್ಯತೆ ನೀಡಲಾಗಿದೆ. ಇವತ್ತು ಪೊಲೀಸರು ಕರೊನಾ ಸೋಂಕು ನಿಯಂತ್ರಣಕ್ಕೆ ಕೈ ಜೋಡಿಸುವ ಜತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು