ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಇಬ್ಬರು ಸೈಬರ್ ವಂಚಕರ ಸೆರೆ

Last Updated 17 ಆಗಸ್ಟ್ 2022, 4:38 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕೆಲಸ ಕೊಡಿಸುವುದಾಗಿ ನಂಬಿಸಿ ಶಿಡ್ಲಘಟ್ಟ ತಾಲ್ಲೂಕಿನ ಗೊರಮೊಡಗು ಗ್ರಾಮದ ಶಾಂತಾ ಅವರನ್ನು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಮದನಪಲ್ಲಿಯ ಗಣೇಶ್ ಮತ್ತು ಚಿಲಮತ್ತೂರು ಗ್ರಾಮದ ಹರೀಶ್ ಕುಮಾರ್ ಬಂಧಿತರು. ಆರೋಪಿಗಳಿಂದ ₹ 1.30 ಲಕ್ಷವನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಇವರು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.

ಶಾಂತಾ ಅವರು ನೌಕರಿ ಕಾಂ ವೆಬ್‌ಸೈಟ್‌ನಲ್ಲಿ ಸ್ವವಿವರಗಳನ್ನು ನೋಂದಾಯಿಸಿ ಕೆಲಸ ಹುಡುಕುತ್ತಿದ್ದರು. ಈ ವೇಳೆ ಗಣೇಶ್ ಎಂಬಾತ ಕರೆ ಮಾಡಿ ಕೆಲಸ ಕೊಡಿಸುವುದಾಗಿ ನಂಬಿಸಿ ವಿವಿಧ ಶುಲ್ಕಗಳ ಹೆಸರಿನಲ್ಲಿ ಶಾಂತ ಅವರಿಂದ ₹ 2,39 ಲಕ್ಷ ಪಡೆದಿದ್ದ. ನಂತರ ಹರೀಶ್ ಕುಮಾರ್ ಕರೆ ಮಾಡಿ ನಾವು ಪೊಲೀಸರು. ನಿಮಗೆ ವಂಚಿಸಿದವರನ್ನು ಪತ್ತೆ ಮಾಡಿ ಹಣ ವಾಪಸ್ ಕೊಡಿಸುತ್ತೇವೆ ಎಂದು ನಂಬಿಸಿ ₹ 55 ಸಾವಿರವನ್ನು ಆನ್‌ಲೈನ್ ಮೂಲಕ ಪಡೆದಿದ್ದ.

ಈ ಸಂಬಂಧ ಸಿಇಎನ್ ಪೊಲೀಸ್ ಠಾಣೆಗೆ ಶಾಂತಾ ದೂರು ಸಲ್ಲಿಸಿದ್ದರು. ಆರೋಪಿಗಳ ಪತ್ತೆ ಹಚ್ಚಿದ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT