ಭಾನುವಾರ, ಮೇ 22, 2022
21 °C
ಕ್ರಿಕೆಟ್ ವಾರಿಯರ್ಸ್ ಕಪ್ ಪಂದ್ಯಾವಳಿ ಆಯೋಜನೆ

ಕ್ರೀಡೆಯಿಂದ ಆರೋಗ್ಯ ಸದೃಢ: ಜಿಲ್ಲಾಧಿಕಾರಿ ಆರ್. ಲತಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ನಿತ್ಯ ಒತ್ತಡದಲ್ಲಿ ಕೆಲಸ ನಿರ್ವಹಿಸುವ ಸರ್ಕಾರಿ ಅಧಿಕಾರಿಗಳು, ನೌಕರರು ಮಾನಸಿಕ, ದೈಹಿಕವಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಆರ್. ಲತಾ ಹೇಳಿದರು.

ನಗರದ ಸರ್ ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆ ಮತ್ತು ಸರ್ಕಾರಿ ನೌಕರರ ಸಂಘದ ಸಹಯೋಗದೊಂದಿಗೆ ಶನಿವಾರ ಆಯೋಜಿಸಿದ್ದ ಕ್ರಿಕೆಟ್ ವಾರಿಯರ್ಸ್ ಕಪ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

‘ಮನುಷ್ಯನಿಗೆ ಕೆಲಸಕ್ಕಿಂತ ಉತ್ತಮ ಆರೋಗ್ಯ ಮುಖ್ಯ. ಆದ್ದರಿಂದ ಪ್ರತಿಯೊಬ್ಬ ನೌಕರರು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ಭಾಗವಹಿಸಬೇಕು. ಇದರಿಂದ ನಾನಾ ರೀತಿಯ ಕಾಯಿಲೆಗಳು ದೂರವಾಗುತ್ತವೆ. ಜತೆಗೆ ದೇಹಕ್ಕೆ ಒತ್ತಡ ಕಡಿಮೆಯಾಗಿ ಮಾಡುವ ಕೆಲಸದಲ್ಲಿ ಚುರುಕು ಮೂಡುತ್ತದೆ’ ಎಂದು ತಿಳಿಸಿದರು.

ಪ್ರತಿಯೊಬ್ಬರೂ ನಿತ್ಯಜೀವನದ ಭಾಗವಾಗಿ ಯೋಗ, ಕ್ರೀಡಾ ಚಟುವಟಿಕೆಗಳನ್ನು ಹವ್ಯಾಸವಾಗಿ ರೂಢಿಸಿಕೊಳ್ಳಬೇಕು. ಇದರಿಂದ ಮನಸ್ಸು ಹಗುರವಾಗುವ ಜತೆಗೆ ಮಾಡುವ ಕೆಲಸದಲ್ಲಿ ಏಕಾಗ್ರತೆ ಹೆಚ್ಚುತ್ತದೆ ಎಂದರು.
‘ಇತ್ತೀಚಿನ ದಿನಗಳಲ್ಲಿ ಅನೇಕರು ದೈಹಿಕ ಕಾಯಿಲೆಗಳಿಗಿಂತಲೂ ಹೆಚ್ಚಾಗಿ ಮಾನಸಿಕವಾಗಿ ಬಳಲಿ ಕಾಯಿಲೆಗಳನ್ನು ಬರ ಮಾಡಿಕೊಳ್ಳುತ್ತಿದ್ದಾರೆ. ಅತಿಯಾದ ಆಲೋಚನೆ, ಚಿಂತೆ ಒಳ್ಳೆಯದಲ್ಲ. ದೇಹವನ್ನು ಸಮಮತೋಲನ ವಾಗಿಟ್ಟುಕೊಳ್ಳಲು ನಿತ್ಯ ಯೋಗಾಭ್ಯಾಸ ಅಗತ್ಯವಿದೆ. ಇದರಿಂದ ಕೆಲಸದಲ್ಲಿ ಆತ್ಮಶಕ್ತಿ ಹೆಚ್ಚುತ್ತದೆ. ಜತೆಗೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ’ ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ 8 ತಂಡಗಳು ಭಾಗವಹಿಸಿದ್ದವು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಇಂದಿರಾ ಕಬಾಡೆ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್, ಖಜಾಂಜಿ ದಿನೇಶ್, ಜಿಲ್ಲಾ ಆಸ್ಪತ್ರೆಯ ವೈದ್ಯರಾದ ಡಾ.ವಿಜಯಲಕ್ಷ್ಮಿ, ಡಾ.ನರಸಿಂಹಮೂರ್ತಿ, ಡಾ.ಪ್ರಕಾಶ್, ಡಾ.ಚನ್ನಕೇಶವರೆಡ್ಡಿ, ಡಾ.ಶಿವಕುಮಾರ್, ಜಂಟಿ ಕಾರ್ಯದರ್ಶಿಗಳಾದ ಅಶೋಕ್, ಶಿವಶಂಕರ್, ಜಯಪ್ರಕಾಶ್, ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್, ಭಾನುಪ್ರಕಾಶ್, ಮಹೇಶ್ ಹಾಜರಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು