ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಎಫ್‌ಬಿ ಖಾತೆ; ಕ್ರಮಕ್ಕೆ ಸೂಚನೆ

Last Updated 15 ಮಾರ್ಚ್ 2021, 4:14 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿ ಆರ್. ಲತಾ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಪರಿಚಿತರಿಗೆ ಮೆಸೆಂಜರ್‌ ಮೂಲಕ ಸಂದೇಶ ಕಳುಹಿಸಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಸಿಕೊಳ್ಳಲು ಪ್ರಯತ್ನಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ನೈಜ ಖಾತೆಯಲ್ಲಿನ ಚಿತ್ರಗಳನ್ನು ಪ್ರೊಪೈಲ್ ಚಿತ್ರವಾಗಿ ಬಳಸಿ ಖದೀಮರು ಮತ್ತೊಂದು ಖಾತೆ ಸೃಷ್ಟಿಸಿದ್ದಾರೆ. ಅವರೊಂದಿಗೆ ಇರುವ ಸ್ನೇಹಿತರಿಗೆ ಕೋರಿಕೆ ಕಳುಹಿಸಿದ್ದಾರೆ. ನಂತರ ಅನುಮಾನ ಬಾರದಂತೆ ಫೇಸ್‌ಬುಕ್ ಮೆಸೆಂಜರ್‌ ಮೂಲಕ ಹಣ ನೀಡುವಂತೆ ಕೋರಿದ್ದಾರೆ.

‘ಡಿಸಿ ಚಿಕ್ಕಬಳ್ಳಾಪುರ (DC Chikkaballpur) ಎಂಬ ಹೆಸರಿನಿಂದ ನಕಲಿ ಫೇಸ್‌ಬುಕ್‌ ಖಾತೆ ತೆರೆಯಲಾಗಿದೆ. ಸ್ನೇಹಿತರಿಗೆ ಕೋರಿಕೆ ಕಳುಹಿಸಿ ನಂತರ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಇದು ಗಮನಕ್ಕೆ ಬಂದಿದೆ. ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ’ ಎಂದು ಜಿಲ್ಲಾಧಿಕಾರಿ ಲತಾ ತಿಳಿಸಿದ್ದಾರೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT