ಚಿಕ್ಕಬಳ್ಳಾಪುರ: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಗ್ರಾಮ ಒನ್ ಕೇಂದ್ರಗಳ ಮೂಲಕ ಯಾವುದೇ ರೀತಿಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕಲು ಬಂದಾಗ ಆ ವಿದ್ಯಾರ್ಥಿಗಳ ಅರ್ಜಿಗಳನ್ನು ಯಾವುದೇ ಶುಲ್ಕ ಪಡೆಯದೆ ಹಾಕಿಕೊಡಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಗ್ರಾಮ ಒನ್ ಕೇಂದ್ರಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ವೇಳೆ ಮಾತನಾಡಿದರು.

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ವಿದ್ಯಾರ್ಥಿ ವೇತನ, ಪರಿಶಿಷ್ಟ ಜಾತಿವರ್ಗದವರ ಅಭಿವೃದ್ಧಿ ಮತ್ತು ವೃದ್ದರ ಆಶ್ರಮ ವ್ಯವಸ್ಥೆಗೆ ಹಾಗೂ ಮದ್ಯ ವ್ಯಸನ ಮುಕ್ತ ಕೇಂದ್ರಗಳ ಸ್ಥಾಪನೆಯ ಉದ್ದೇಶಕ್ಕಾಗಿ ಹಲವು ಕಾರ್ಯಕ್ರಮ ಜಾರಿಗೊಳಿಸುತ್ತಿದೆ ಎಂದರು.

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯ ಸರ್ಕಾರಿ ಪ್ರೌಢಶಾಲೆ ಹಾಗೂ ಮಳ್ಳೂರಿನ ಸ್ವಾಮಿ ವಿವೇಕಾನಂದ ಪ್ರೌಢಶಾಲೆಗಳ ಒಟ್ಟು 187 ವಿದ್ಯಾರ್ಥಿಗಳಿಗೆ ಹಾಗೂ ಚಿಂತಾಮಣಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 338 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಈ ಶಾಲಾ ಕಾಲೇಜುಗಳ ಕೆಲವು ವಿದ್ಯಾರ್ಥಿಗಳಿಗೆ ತಾಂತ್ರಿಕ ಕಾರಣಗಳು ಹಾಗೂ ಸೈಬರ್ ಸೆಂಟರ್ ಗಳಲ್ಲಿ ಹಣ ಪಾವತಿಸಿ ಅರ್ಜಿ ಹಾಕಲು ತೊಡಕಾಗಿದ್ದರಿಂದ ವಿದ್ಯಾರ್ಥಿ ವೇತನ ವಂಚಿತರಾಗಿರುವುದು ಕಂಡು ಬಂದಿದೆ ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ಉಚಿತವಾಗಿ ಸಲ್ಲಿಸಲು ಸರ್ಕಾರ ಆದೇಶಿಸಿದೆ. ಗ್ರಾಮ ಒನ್ ಕೇಂದ್ರಗಳ ಮುಖ್ಯಸ್ಥರು ಹಾಗೂ ನಿರ್ವಾಹಕರು ಈ ಆದೇಶ ಪಾಲಿಸಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದರು.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 20 ಗುರಿಗಳನ್ನು ಹೊಂದಲಾಗಿತ್ತು. ಈ ಪೈಕಿ 10 ಗುರಿ ಅನುಷ್ಠಾನಗೊಳಿಸಲಾಗಿದೆ. ಅನುದಾನ ಬಿಡುಗಡೆಯಾಗದ ಕಾರಣ 10 ಗುರಿ ಸಾಧನೆ ಸಾಧ್ಯವಾಗಿಲ್ಲ. ಅನುದಾನ ಬಿಡುಗಡೆಯಾದ ಕೂಡಲೆ ಉಳಿದ ಗುರಿಗಳ ಸಾಧನೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಜಿಲ್ಲೆಯ 10 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಸರ್ಕಾರದಿಂದ ಅನುದಾನ ಬಂದ ಕೂಡಲೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಪರಿಶಿಷ್ಟ ಜಾತಿ ಜನರ ಏಳಿಗೆಗೆ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುವುದು ಎಂದರು.

ರಾಜ್ಯ ಕಾರ್ಯಕ್ರಮ ವ್ಯವಸ್ಥಾಪಕಿ ಬಿ.ಲೋಚನಾ, ವ್ಯವಸ್ಥಾಪಕ ನರಸಾರೆಡ್ಡಿ ವರಂಗಲ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಎಂ. ಸಿ ಅನಿತಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.