ಮಂಗಳವಾರ, ಡಿಸೆಂಬರ್ 1, 2020
19 °C

ಟಿ.ಎನ್. ರಾಜಗೋಪಾಲ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ಜೆಡಿಎಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎನ್. ರಾಜಗೋಪಾಲ್(70) ಬುಧವಾರ ರಾತ್ರಿ ನಿಧನರಾದರು.

ಮೃತರಿಗೆ ಐವರು ಪುತ್ರಿಯರು ಇದ್ದಾರೆ. ಮೂರು ವರ್ಷಗಳ ಹಿಂದೆ ಅವರ ಪತ್ನಿ ಮೃತಪಟ್ಟಿದ್ದರು. ಆರು ತಿಂಗಳ ಹಿಂದೆ ಏಕೈಕ ಪುತ್ರ ಕೂಡ ಮೃತಪಟ್ಟಿದ್ದರು.

ರಾಜಗೋಪಾಲ್‌ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ದೇವನಹಳ್ಳಿಯ ಖಾಸಗಿ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಗುರುವಾರ ಸ್ವಗ್ರಾಮವಾದ ತಳಗವಾರದಲ್ಲಿ ಅಂತ್ಯಕ್ರಿಯೆ ನಡೆಯಿತು.  

ವೇಮಗಲ್ ವಿಧಾನಸಭಾ ಕ್ಷೇತ್ರದಲ್ಲಿ ದಿವಂಗತ ಸಿ. ಬೈರೇಗೌಡ ಅವರ ಶಿಷ್ಯರಾಗಿ ರಾಜಕೀಯ ಜೀವನ ಆರಂಭಿಸಿದ್ದರು. ಬೈರೇಗೌಡ ಅವರ ನಿಧನದ ನಂತರ ಕೃಷ್ಣಬೈರೇಗೌಡ ಮತ್ತು ಡಾ.ಎಂ.ಸಿ. ಸುಧಾಕರ್ ನೇತೃತ್ವದಡಿ ಕಾಂಗ್ರೆಸ್ಸಿಗೆ ಸೇರಿದ್ದರು. ಅಲ್ಲಿನ ನಾಯಕರ ಜತೆ ಹೊಂದಾಣಿಕೆಯಾಗದೆ ಮತ್ತೆ ಜೆಡಿಎಸ್‌ಗೆ ವಾಪಸ್ ಆಗಿದ್ದರು.

ಹಲವಾರು ವರ್ಷಗಳ ಕಾಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕರಾಗಿ ಎರಡು ಅವಧಿಗೆ ಆಯ್ಕೆಯಾಗಿದ್ದರು. ಸ್ವಲ್ಪಕಾಲ ಕೋಚಿಮುಲ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಚಿಂತಾಮಣಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿದ್ದರು. ಕಳೆದ 10 ವರ್ಷಗಳಿಂದ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ರಾಜಗೋಪಾಲ್ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪತ್ನಿ ಅನಿತಾ ಅವರ ಸಂಬಂಧಿಯಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು