ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ರಾಜ್ಯೋತ್ಸವ ಸರಳ ಆಚರಣೆಗೆ ನಿರ್ಧಾರ

Last Updated 15 ಅಕ್ಟೋಬರ್ 2020, 16:11 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಕೋವಿಡ್ -19 ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾರಣಕ್ಕೆ ಈ ಬಾರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನಗರದ ಸರ್.ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಕೋವಿಡ್-19 ಕಾರಣ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆ ಆಯೋಜಿಸುತ್ತಿಲ್ಲ. ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮುನ್ನೆಚ್ಚರಿಕೆ ಕ್ರಮವಾಗಿ ಮುಖಗವಸು ಧರಿಸಬೇಕು. ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳು, 60 ವರ್ಷ ದಾಟಿದ ಹಿರಿಯರು ನಾಗರಿಕರಿಗೆ ಅವಕಾಶ ಇರುವುದಿಲ್ಲ’ ಎಂದು ಹೇಳಿದರು.

‘ನಗರಸಭೆಯವರು ಜಿಲ್ಲಾ ಕ್ರೀಡಾಂಗಣವನ್ನು ಸ್ವಚ್ಚಗೊಳಿಸಿ, ವೇದಿಕೆ ನಿರ್ಮಾಣದ ಜತೆಗೆ ಧ್ವನಿವರ್ಧಕ ವ್ಯವಸ್ಥೆ, ಅಲಂಕಾರ ವ್ಯವಸ್ಥೆ ಮಾಡಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ಯಕ್ರಮಕ್ಕೆ ಬರುವ ಎಲ್ಲಾ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ತಪಾಸಣೆ ಮಾಡಬೇಕು’ ಎಂದು ಸೂಚಿಸಿದರು.

‘ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಭಾಷೆ, ನಾಡು ನುಡಿ, ಕಲೆ, ಮತ್ತು ಸಂಸ್ಕೃತಿ, ಕ್ರೀಡೆ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಶ್ರಮಿಸಿರುವ ಐದು ಜನರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸರ್ಕಾರಿ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲಾಗುತ್ತದೆ’ ಎಂದು ತಿಳಿಸಿದರು.

‘ಕನ್ನಡ ರಾಜ್ಯೋತ್ಸವ ದಿನದಂದು ಪೊಲೀಸ್ ಇಲಾಖೆ ಕ್ರಮಬದ್ದ ಪಥಸಂಚಲನ, ತೆರೆದ ಜೀಪಿನ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಯ್ದಕೊಳ್ಳಲು ವೇದಿಕೆಯ ಎಡ ಮತ್ತು ಬಲ ಭಾಗದಲ್ಲಿ ಆಸನಗಳ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT