ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪರಿಸರ ಸ್ನೇಹಿ ಹಬ್ಬ ಆಚರಿಸಿ’

ಸ್ವಭಿಷ್ಟಿ ತಂಡ, ಸರ್ ಎಂ.ವಿ. ಕಾರ್ಮಿಕ ಸೇವಾ ಸಂಘದಿಂದ ಸೈಕಲ್‌ ಜಾಥಾ
Last Updated 15 ನವೆಂಬರ್ 2020, 2:31 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸುವುದರಿಂದ ಉಂಟಾಗುವ ಪರಿಸರ ಮತ್ತು ವಾಯು ಮಾಲಿನ್ಯಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ನಗರದಲ್ಲಿ ಶನಿವಾರ ಸ್ವಭಿಷ್ಟಿ ತಂಡ ಮತ್ತು ಕರ್ನಾಟಕ ರಾಜ್ಯ ಸರ್.ಎಂ.ವಿ.ಕಾರ್ಮಿಕ ಸೇವಾ ಸಂಘದ ಸಹಯೋಗದಲ್ಲಿ ಸೈಕಲ್‌ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಜಾಥಾಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ‘ಈ ಬಾರಿಯ ದೀಪಾವಳಿಯಲ್ಲಿ ಹಸಿರು ಪಟಾಕಿ ಹೊರತುಪಡಿಸಿ ಇತರೆ ಯಾವುದೇ ಪಟಾಕಿಗಳನ್ನು ಸಿಡಿಸಬಾರದು. ಆ ಮೂಲಕ ಪರಿಸರಸ್ನೇಹಿ ಹಬ್ಬ ಆಚರಿಸಲು ಸಾರ್ವಜನಿಕರು ಸಹಕರಿಸಬೇಕು’ ಎಂದು ಹೇಳಿದರು.

‘ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಬಳಕೆ ಮಾಡಬೇಕು. ಪಟಾಕಿ ಬಾಕ್ಸ್‌ಗಳ ಮೇಲೆ ಇರುವ ಚಿಹ್ನೆಗಳು ಹಾಗೂ ಕ್ಯೂಆರ್ ಕೋಡ್ ಮೂಲಕ ಹಸಿರು ಪಟಾಕಿಗಳನ್ನು ಗುರುತಿಸಬಹುದಾಗಿದೆ’ ಎಂದು ತಿಳಿಸಿದರು.

‘ನಾಗರಿಕರು ಹಾಗೂ ಮಾರಾಟಗಾರರು ಸರ್ಕಾರದ ಆದೇಶ ಪಾಲಿಸಲು ಕೈಜೋಡಿಸಬೇಕು. ಸರ್ಕಾರ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು’ ಎಂದರು.

ಎಂ.ಜಿ.ರಸ್ತೆಯ ಮರಳು ಸಿದ್ದೇಶ್ವರ ಸ್ವಾಮಿ ದೇವಾಲಯದ ಮುಂಭಾಗದಿಂದ ಆರಂಭಗೊಂಡ ಸೈಕಲ್ ಜಾಥಾ ಶಿಡ್ಲಘಟ್ಟ ವೃತ್ತ, ಬಲಮುರಿ ಸರ್ಕಲ್, ಬಜಾರ್ ರಸ್ತೆ, ಗಂಗಮ್ಮ ಗುಡಿ ರಸ್ತೆ ಮೂಲಕ ಸಾಗಿ ಎಪಿಎಂಸಿ ವರೆಗೆ ತಲುಪಿ ಮುಕ್ತಾಯಗೊಂಡಿತು.

ಸ್ವಭಿಷ್ಟಿ ತಂಡದ ಮುಖ್ಯಸ್ಥೆ ನರ್ಮದಾ ರೆಡ್ಡಿ, ನಗರ ಪೊಲೀಸ್ ಠಾಣೆ ಪಿ.ಎಸ್.ಐ ಹೊನ್ನೇಗೌಡ, ನಗರಸಭೆ ಸದಸ್ಯ ಆರ್.ಮಟಮಪ್ಪ, ಶಿಕ್ಷಕ ಗುಂಪುಮರದ ಆನಂದ್, ಕರ್ನಾಟಕ ರಾಜ್ಯ ಸರ್ ಎಂ.ವಿ. ಕಾರ್ಮಿಕ ಸೇವಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್ ಮತ್ತು ಮಕ್ಕಳು ಜಾಥಾದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT