ಸೋಮವಾರ, ಏಪ್ರಿಲ್ 19, 2021
27 °C

ನಾಯಿ ದಾಳಿಗೆ ಕೃಷ್ಣಮೃಗ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ತಾಲ್ಲೂಕಿನ ವೈ. ಹುಣಸೇನಹಳ್ಳಿಯಲ್ಲಿ ನಾಯಿಗಳ ದಾಳಿಗೆ ತುತ್ತಾಗಿದ್ದ ಕೃಷ್ಣಮೃಗವನ್ನು ಸೋಮವಾರ ಗ್ರಾಮಸ್ಥರು ರಕ್ಷಿಸಿ
ಅರಣ್ಯ ಇಲಾಖೆಯ ಸಿಬ್ಬಂದಿಗೆ ಒಪ್ಪಿಸಿದರು. ಆದರೆ, ಅರಣ್ಯ ಇಲಾಖೆಯ ಸಿಬ್ಬಂದಿ ವೈದ್ಯಕೀಯ ಚಿಕಿತ್ಸೆ ಕೊಡಿಸಿದರಾದರೂ ಫಲಕಾರಿಯಾಗದೇ ಅದು ಮೃತಪಟ್ಟಿದೆ.

ಬೇಸಿಗೆಯ ಬೇಗೆ ತಡೆಯಲಾರದೆ ಕೃಷ್ಣಮೃಗ ಹಳ್ಳಿಯ ಬಳಿ ಬಂದಿರಬೇಕು. ಅರಣ್ಯ ಪ್ರದೇಶದಲ್ಲಿ ಪ್ರಾಣಿಗಳಿಗಾಗಿ ನೀರು ಇಡುವ ವ್ಯವಸ್ಥೆಯಾಗಬೇಕು. ತ್ವರಿತವಾಗಿ ಕ್ರಮವಹಿಸಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ರಾಜಪ್ಪ ಒತ್ತಾಯಿಸಿದರು.

ಅರಣ್ಯ ಇಲಾಖೆಯ ರಮೇಶ್, ಗೋವಿಂದರಾಜ್, ಗ್ರಾಮ ಪಂಚಾಯಿತಿ ಸದಸ್ಯ ರಾಜಪ್ಪ, ರಂಜಿತ್, ಸುಮನ್ ಹಾಜರಿದ್ದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.