ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತಮ ಫಲಿತಾಂಶ

Last Updated 13 ನವೆಂಬರ್ 2020, 2:03 IST
ಅಕ್ಷರ ಗಾತ್ರ

ಚಿಂತಾಮಣಿ: ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಎಚ್.ಇ.ಕೆ ಪದವಿ ವಿಭಾಗದಲ್ಲಿ 14 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ತೇರ್ಗಡೆಯಾಗಿದ್ದಾರೆ.

ರಾಜೇಶ್ ಎಂಬ ವಿದ್ಯಾರ್ಥಿ 1000 ಅಂಕಗಳಿಗೆ 921 ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಐಚ್ಛಿಕ ಕನ್ನಡ ಪತ್ರಿಕೆ 8ರಲ್ಲಿ 100ಕ್ಕೆ 99 ಅಂಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.

ಆತ ತಾಲ್ಲೂಕಿನ ಕುಗ್ರಾಮವಾದ ರಾಚಾಪುರದ ತನ್ನ ಅಜ್ಜಿ ಮನೆಯಲ್ಲಿ ನೆಲಸಿ ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮುಂದುವರಿಸಿದ್ದರು.

‘ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಪೋಷಕರ ಸಹಕಾರವೇ ಈ ಸಾಧನೆಗೆ ಕಾರಣ’ ಎನ್ನುತ್ತಾನೆ ವಿದ್ಯಾರ್ಥಿ ರಾಜೇಶ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT