ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಲಾನುಭವಿಗೆ ಯೋಜನೆ ತಲುಪಿಸಿ

ಬಾಗೇಪಲ್ಲಿ ತಾ.ಪಂ. ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ
Last Updated 18 ಜನವರಿ 2021, 2:08 IST
ಅಕ್ಷರ ಗಾತ್ರ

ಬಾಗೇಪಲ್ಲಿ: ‘ಮಾರ್ಚ್‌ ಒಳಗೆ ಬಾಕಿ ಇರುವ ಸರ್ಕಾರದ ಯೋಜನೆಗಳ ಅನುದಾನಗಳನ್ನು ಎಲ್ಲ ಇಲಾಖೆಯ ಅಧಿಕಾರಿಗಳು ಬಿಡುಗಡೆ ಮಾಡಿಸಿಕೊಂಡು, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಆರ್. ನರೇಂದ್ರಬಾಬು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಗ್ರಾಮಗಳಿಗೆ ಕುಡಿಯುವ ನೀರು, ರಸ್ತೆ, ಮನೆ-ನಿವೇಶನ ಸೇರಿದಂತೆ ಕನಿಷ್ಠ ಮೂಲಸೌಲಭ್ಯ ಕಲ್ಪಿಸಬೇಕು. ಸಮರ್ಪಕವಾಗಿ ನರೇಗಾ ಕೆಲಸದ ಕೂಲಿ ಹಣ ನೀಡಬೇಕು. ಅಂಬೇಡ್ಕರ್ ಭವನ ನಿರ್ಮಾಣ ಆಗಬೇಕು ಎಂದು ತಿಳಿಸಿದರು.

ಪ್ರಗತಿ ಪರಿಶೀಲನಾ ಸಭೆಗೆ ಕಡ್ಡಾಯವಾಗಿ ಅಧಿಕಾರಿಗಳು ಹಾಜರಾಗಬೇಕು. ಇಲಾಖೆಗಳಲ್ಲಿ ಪ್ರಗತಿಯ ಬಗ್ಗೆ ತಿಳಿಸಬೇಕು ಎಂದು ತಾಲ್ಲೂಕು ಪಂಚಾಯಿತಿಯಿಂದ ನೋಟಿಸ್ ನೀಡಲಾಗಿದೆ. ಆದರೆ ಸಭೆಗೆ ಕೆಲ ಅಧಿಕಾರಿಗಳು ಗೈರಾಗಿದ್ದಾರೆ. ಅವರಿಗೆ ನೋಟಿಸ್ ಜಾರಿ ಮಾಡುವಂತೆ ಇಒ ಮಂಜುನಾಥಸ್ವಾಮಿಗೆ ತಿಳಿಸಿದರು.

ತಾಲ್ಲೂಕಿನಲ್ಲಿ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಕೊರೊನಾ ಸಂದರ್ಭದಲ್ಲಿ ಪೋಷಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿವೆ. ಕೂಡಲೇ ತನಿಖೆ ಮಾಡಿ ತಪ್ಪಿತಸ್ಥ ಆಡಳಿತ ಮಂಡಳಿಗಳ ವಿರುದ್ಧ ಕ್ರಮ ಜರುಗಿಸುವಂತೆ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಸಿದ್ದಪ್ಪಗೆ ಸೂಚಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಸರಸ್ವತಮ್ಮ ಶಿವರಾಮರೆಡ್ಡಿ, ಸ್ಥಾಯಿಸಮಿತಿ ಅಧ್ಯಕ್ಷ ಬಿ.ವಿ. ಮಂಜುನಾಥ್, ನರೇಗಾ ತಾಲ್ಲೂಕು ಅಧಿಕಾರಿ ವಿ. ನಾರಾಯಣ, ಶಿಶು ಕಲ್ಯಾಣಾಧಿಕಾರಿ ರಾಜೇಂದ್ರಪ್ರಸಾದ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಕೆ.ಎಸ್. ರಾಮಲಿಂಗಾರೆಡ್ಡಿ, ತಾಲ್ಲೂಕು ಸಾಕ್ಷರತಾ ಅಧಿಕಾರಿ ಶಿವಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT