ಚಿಂತಾಮಣಿ: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಿದ ಬಳಿಕವೇ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಒತ್ತಾಯಿಸಿ ಬಹುಜನ ಸಮಾಜವಾದಿ ಪಕ್ಷದ ವತಿಯಿಂದ ಮಾರ್ಚ್ 12ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಪಕ್ಷದ ಕಾರ್ಯದರ್ಶಿ ಕವಾಲಿ ವೆಂಕಟರವಣಪ್ಪ, ಒಳ ಮೀಸಲಾತಿ ಜಾರಿಗೊಳಿಸುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾದಿಗ ಸಮುದಾಯಕ್ಕೆ ವಂಚಿಸಿದ್ದಾರೆ ಎಂದು ಆರೋಪಿಸಿದರು. ಎಡ ಮತ್ತು ಬಲ ಜಾತಿಗಳ ನಡುವೆ ತಂತ್ರ-ಕುತಂತ್ರ ನಡೆಸಿ ಮಾದಿಗರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ದೂರಿದರು.

ಪಕ್ಷದ ಜಿಲ್ಲಾ ಉಪಾಧ್ಯಕ್ಷ ಎಂ.ಆರ್.ನಾರಾಯಣಸ್ವಾಮಿ ಮಾತನಾಡಿ, ಒಳಮೀಸಲಾತಿ ಅನ್ವಯಿಸದೆ 56,432 ಹುದ್ದೆಗಳ ಭರ್ತಿಗೆ ಸರ್ಕಾರ ಡಿಪಿಎಆರ್ ಅಧಿಸೂಚನೆ ಹೊರಡಿಸಿದೆ. ಇದನ್ನು ಕೂಡಲೇ ಹಿಂಪಡೆಯಬೇಕು. ಮಾರ್ಚ್ 12ರ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ವಿಧಾನಸೌಧಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಕೋಡಿಗಲ್ ರಮೇಶ್, ಉಪಾಧ್ಯಕ್ಷ ಗಂಗಾಧರ್, ತಾಲ್ಲೂಕು ಅಧ್ಯಕ್ಷ ಸುರೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.