ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಘಟ್ಟ | ಇವಿಎಂ, ವಿ.ವಿ ಪ್ಯಾಟ್ ಪ್ರಾತ್ಯಕ್ಷಿಕೆ

Last Updated 18 ಮಾರ್ಚ್ 2023, 5:21 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಳಕೆ ಹಾಗೂ ಮತದಾನ ಖಾತ್ರಿಯಂತ್ರ (ವಿ.ವಿ. ಪ್ಯಾಟ್) ಕಾರ್ಯವೈಖರಿ ಕುರಿತು ಇಲ್ಲಿನ ಕುಂಬಾರಪೇಟೆ ಅಂಗನವಾಡಿಯಲ್ಲಿ ಶುಕ್ರವಾರ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಯಿತು.

ಸೆಕ್ಟರ್ ಅಧಿಕಾರಿ ನಂಜಪ್ಪ ಮಾತನಾಡಿ, ‘ವಿದ್ಯುನ್ಮಾನ ಮತ ಯಂತ್ರಗಳು ಹೇಗೆ ಕಾರ್ಯ ನಿರ್ವಹಿಸುತ್ತವೆ. ಅವುಗಳ ಮೂಲಕ ಜನರು ಹೇಗೆ ಮತ ಚಲಾವಣೆ ಮಾಡಬೇಕು ಎಂಬ ಕುರಿತು ಜಾಗೃತಿ ಮೂಡಿಸಲಾಗುತ್ತಿದ್ದು, ಯುವಕರು, ಸಾರ್ವಜನಿಕರು ಸದುಪಯೋಗ ಪಡೆಸಿಕೊಳ್ಳಬೇಕು’ ಎಂದರು.

ನಗರಸಭಾ ಸದಸ್ಯ ಎಲ್. ಅನಿಲ್ ಕುಮಾರ್ ಮಾತನಾಡಿ, ‘ಅಧಿಕಾರಿಗಳು ವಿ.ವಿ ಪ್ಯಾಟ್ ಬಳಕೆ ಬಗ್ಗೆ ಪ್ರಾತ್ಯಕ್ಷತೆ ಮೂಲಕ ಚುನಾವಣಾ ಪ್ರಕ್ರಿಯೆ ಬಗ್ಗೆ ವಿಶ್ವಾಸ ಮೂಡಿಸುತ್ತಿದ್ದಾರೆ. ಮತದಾರರು ಪಾಲ್ಗೊಂಡು ಅಣಕು ಮತದಾನ ಮಾಡಿ, ಇವಿಎಂ ಯಂತ್ರದಲ್ಲಿ ಮತ ಚಲಾಯಿಸುವ ಹಾಗೂ ಮತದಾನ ಖಾತ್ರಿ ಮಾಡಿಕೊಳ್ಳುವ ಬಗ್ಗೆ ಖುದ್ದು ಮನವರಿಕೆ ಮಾಡಿಕೊಳ್ಳಬಹುದು. ಯುವ ಮತದಾರರು ಹಾಗೂ ಮೊದಲ ಬಾರಿಗೆ ಮತದಾನ ಮಾಡುವವರಿಗೆ ಇದು ಸಹಕಾರಿಯಾಗಲಿದೆ’ ಎಂದು ತಿಳಿಸಿದರು.

ಬಿಎಲ್ಒಗಳಾದ ಪ್ರೇಮಾ, ಸುಂದರಾಚಾರಿ, ನಗರಸಭೆಯ ಕಿರಣ್, ಅಮರನಾರಾಯಣಾಚಾರಿ, ಉಸ್ಮಾನ್ ಸಾಬ್, ಸೈಫುಲ್ಲಾ, ಮನ್ಸೂರ್ ಇಲಾಹಿ, ಅಶ್ವಿನಿ, ಚಿನ್ನಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT