ಗುರುವಾರ, 21 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಘಟ್ಟ | ಡೆಂಗು ಜಾಗೃತಿ ರಥಕ್ಕೆ ಚಾಲನೆ

Published 20 ಆಗಸ್ಟ್ 2023, 13:47 IST
Last Updated 20 ಆಗಸ್ಟ್ 2023, 13:47 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಡೆಂಗಿ ಜ್ವರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ರಥಕ್ಕೆ ಭಾನುವಾರ ಚಾಲನೆ ನೀಡಲಾಯಿತು. 

ಡೆಂಗಿ ಜ್ವರದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಸಂಚರಿಸುವ ವಾಹನಕ್ಕೆ ಚಾಲನೆ ನೀಡಲಾಗಿದೆ. ಡೆಂಗಿ ತಡೆಗೆ ವ್ಯಾಪಕವಾಗಿ ಮಾಹಿತಿ ನೀಡುವ ಅಗತ್ಯವಿದೆ ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು. 

ಡೆಂಗಿ ಕೇವಲ ಜ್ವರ ಅಲ್ಲ, ಅದು ಸೋಂಕು ಹೊಂದಿದ ಸೊಳ್ಳೆ ಮೂಲಕ ಹರಡುವ ವೈರಸ್ ಆಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಅಗತ್ಯವಿದೆ ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಮಾತನಾಡಿ, ಡೆಂಗಿ ಜ್ವರ ಇರುವವರಿಗೆ ನಿರಂತರವಾಗಿ ಸುಸ್ತು ಆಯಾಸ ಮತ್ತು ಬಿಟ್ಟು ಬಿಟ್ಟು ಜ್ವರ ಬರುತ್ತದೆ. ಜೊತೆಗೆ ಚರ್ಮದ ಮೇಲೆ ಅಲ್ಲಲ್ಲಿ ಗಾಯಗಳು ಕಂಡುಬರುತ್ತವೆ. ಯಾವುದೇ ಕಾರಣಕ್ಕೂ  ನಿಮಗೆ ನೀವೇ ಔಷಧಿ ತೆಗೆದುಕೊಳ್ಳಬಾರದು. ವೈದ್ಯರ ಬಳಿ ತೋರಿಸಬೇಕು ಎಂದು ಸಲಹೆ ನೀಡಿದರು. 

ತಹಶೀಲ್ದಾರ್ ಬಿ.ಎನ್.ಸ್ವಾಮಿ, ತಾಲ್ಲೂಕು ಪಂಚಾಯಿತಿ ಇಒ ಮುನಿರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ವಿವಿಧ ಜನಪ್ರತಿನಿಧಿಗಳು, ಸಾರ್ವಜನಿಕರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT