ಬಾಗೇಪಲ್ಲಿ: ಶಾಸಕ ಎಸ್.ಎನ್. ಸುಬ್ಬಾರೆಡ್ಡಿರವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೊವನ್ನು ಸಾಮಾಜಿಕ ಜಾಲತಾಣಗಳನ್ನು ಹರಿಬಿಟ್ಟಿರುವ ಯುವಕನ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ, ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರು, ತಾಲ್ಲೂಕು, ಗ್ರಾಮ ಪಂಚಾಯಿತಿ ಸದಸ್ಯರು, ಕಾಂಗ್ರೆಸ್ ಮುಖಂಡರು, ಸುಬ್ಬಾರೆಡ್ಡಿ ಅಭಿಮಾನಿಗಳು ಗುರುವಾರ ಪಟ್ಟಣದ ಬಸ್ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದ ಮುಂದೆ ಜಮಾಯಿಸಿದ ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸುಬ್ಬಾರೆಡ್ಡಿರವರ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿರುವ
ಯುವಕನ ವಿರುದ್ಧ ಧಿಕ್ಕಾರಗಳನ್ನು ಕೂಗಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನರಸಿಂಹಪ್ಪ ಮಾತನಾಡಿ, ‘ಸುಬ್ಬಾರೆಡ್ಡಿ ಅವರು ಶಾಸಕರಾದ 7 ವರ್ಷಗಳಿಂದ ಕೋಮುಗಲಭೆಗಳು, ಅಶಾಂತಿ ಹಾಗೂ ಗಲಾಟೆಗಳು ನಡೆದಿಲ್ಲ. ಎಲ್ಲ ಸಮುದಾಯದವರನ್ನು ಒಗ್ಗೂಡಿಸಿ, ಸಮಾನ ಅವಕಾಶ ನೀಡಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಹ ರಾಜಕೀಯ ಮಾಡದೇ, ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಚುನಾಯಿತರಾಗಿದ್ದಾರೆ. ಕ್ಷೇತ್ರದ ಬಗ್ಗೆ ಗಾಳಿ ಗಂಧ ತಿಳಿಯದ ಕೆಲವರು ತಮ್ಮ ಬೆಂಬಲಿಗರ ಮೂಲಕ ಸುಬ್ಬಾರೆಡ್ಡಿರವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಯುವಕನ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ನರೇಂದ್ರ ಮಾತನಾಡಿ, ‘ರಾಜಕೀಯ ಚುನಾವಣೆಗಳಲ್ಲಿ ಇರಬೇಕು. ಸುಬ್ಬಾರೆಡ್ಡಿರವರು ಕ್ಷೇತ್ರದಲ್ಲಿ ಶಾಂತಿಯ ವಾತಾವರಣ ಇರಬೇಕು ಎಂದು ಬಯಸುವವರಾಗಿದ್ದಾರೆ. ಆದರೆ ಕ್ಷೇತ್ರದ ಬಗ್ಗೆ ತಿಳಿಯದ ಗುಂಜೂರು ಶ್ರೀನಿವಾಸರೆಡ್ಡಿ ಬೆಂಬಲಿಗ ಉಪ್ಪುಕುಂಟಪಲ್ಲಿ ಮಧುಸೂದನರೆಡ್ಡಿ ಮದ್ಯ ಸೇವಿಸಿ, ಸುಬ್ಬಾರೆಡ್ಡಿರವರನ್ನು ಏಕವಚನದಲ್ಲಿ ನಿಂದಿಸಿ, ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದುಬಿಟ್ಟಿರುವ ಯುವಕನನ್ನು ಬಂಧಿಸಬೇಕು’ ಎಂದು ಒತ್ತಾಯಿಸಿದರು.

ಸರ್ಕಲ್ ಇನ್ಸ್ಪೆಕ್ಟರ್ ನಯಾಜ್ ಬೇಗ್ ನೇತೃತ್ವದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೆಲ ಕಾಲ ಬಸ್ ನಿಲ್ದಾಣದ ಕೆಲ ಅಂಗಡಿಗಳು ಮುಚ್ಚಿದ್ದವು. ಮುಖ್ಯರಸ್ತೆಯಲ್ಲಿ ಮುಖಂಡರು ಪ್ರತಿಭಟಿಸಿದ್ದರಿಂದ, ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು.

ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ: ಇಂದು ಎಂಟನೇ ಸುತ್ತಿನ ಮಾತುಕತೆ

ಕೆಡಿಪಿ ಸದಸ್ಯ ಅಮರನಾಥರೆಡ್ಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಆರ್.ನರೇಂದ್ರಬಾಬು, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ವಿ.ಮಂಜುನಾಥ್, ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕ ಮಂಜುನಾಥರೆಡ್ಡಿ, ಪುರಸಭೆ ಅಧ್ಯಕ್ಷೆ ಗುಲ್ನಾಜ್ ಬೇಗಂ, ಉಪಾಧ್ಯಕ್ಷ ಎ.ಶ್ರೀನಿವಾಸ್ ಯುವ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಸೋಮಶೇಖರ್, ಪುರಸಭಾ ಸದಸ್ಯರಾದ ಎ.ನಂಜುಂಡಪ್ಪ, ಶ್ರೀನಿವಾಸರೆಡ್ಡಿ, ಅಶೋಕ್ ರೆಡ್ಡಿ, ಗಡ್ಡಂರಮೇಶ್, ಮುಖಂಡರಾದ ಪ್ರಭಾಕರರೆಡ್ಡಿ, ಶಿವರಾಮರೆಡ್ಡಿ, ಯರ್ರಕಿಟ್ಟಪ್ಪ, ಪಿ.ಎ.ನಾಗರಾಜರೆಡ್ಡಿ, ಮಹಿಳಾ ಮುಖಂಡರಾದ ನಜೀರಾಬೇಗಂ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.