ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಚಲಿತ ವಿದ್ಯಮಾನಗಳ ಅರಿವು ಬೆಳೆಸಿಕೊಳ್ಳಿ

ಅಗಲಗುರ್ಕಿ ಬಿಜಿಎಸ್ ಇಂಗ್ಲಿಷ್ ಶಾಲೆಯಲ್ಲಿ ‘ಪ್ರತಿಭಾನ್ವೇಷಣೆ’ ಕಾರ್ಯಕ್ರಮ
Last Updated 1 ಡಿಸೆಂಬರ್ 2019, 11:59 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಇಂದಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆ ಹೆಚ್ಚಾಗಿದೆ. ಆದ್ದರಿಂದ, ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ವಿಷಯಗಳ ಬಗ್ಗೆಯೂ ಅರಿತುಕೊಳ್ಳಬೇಕು. ಅದಕ್ಕಾಗಿ ನಿತ್ಯ ದಿನಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದು ಆದಿಚುಂಚನಗಿರಿಯ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಂದನಾಥ ಸ್ವಾಮೀಜಿ ತಿಳಿಸಿದರು.

ನಗರದ ಹೊರವಲಯದ ಅಗಲಗುರ್ಕಿ ಬಿಜಿಎಸ್ ಇಂಗ್ಲಿಷ್ ಶಾಲೆಯಲ್ಲಿ ಆಯೋಜಿಸಿದ್ದ ‘ಪ್ರತಿಭಾನ್ವೇಷಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಶಿಕ್ಷಕರು ಮತ್ತು ಪೋಷಕರು ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಬೇಕು. ಅವರ ಅಭಿರುಚಿ, ಆಸಕ್ತಿಯ ಕ್ಷೇತ್ರ ಪತ್ತೆ ಹಚ್ಚಿ ಭವಿಷ್ಯದಲ್ಲಿ ಉತ್ತಮ ಸಾಧನೆ ರೂಪಿಸಲು ವೇದಿಕೆ ಕಲ್ಪಿಸಬೇಕು. ಅದರಿಂದ ವ್ಯಾಸಂಗದ ನಂತರ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತೀರ್ಣರಾಗುವುದು ಸುಲಭವಾಗುತ್ತದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಮನೋಬಲ ವೃದ್ಧಿಯಾಗುವ ಜತೆಗೆ ನೈತಿಕ ಸ್ಥೈರ್ಯ ಹೆಚ್ಚುತ್ತದೆ’ ಎಂದು ಹೇಳಿದರು.

ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಎನ್.ಶಿವರಾಮರೆಡ್ಡಿ ಮಾತನಾಡಿ, ‘ವಿದ್ಯಾರ್ಥಿ ಜೀವನದಲ್ಲಿ ಸಮಯ ಅತ್ಯಮೂಲ್ಯವಾದದ್ದು. ಕಲಿಕೆ ಮತ್ತು ವ್ಯಕ್ತಿತ್ವವನ್ನು ಗಟ್ಟಿಗೊಳಿಸಿಕೊಳ್ಳಲು ಸಮಯವನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಪ್ರತಿ ಕ್ಷಣವನ್ನು ತಮ್ಮ ಭವಿಷ್ಯದ ಬೆಳವಣಿಗಾಗಿ ಬಳಸಿಕೊಳ್ಳಬೇಕು. ಪ್ರತಿ ವಿದ್ಯಾರ್ಥಿಯಲ್ಲೂ ಪ್ರತಿಭೆಯಿದೆ. ಶಿಕ್ಷಕರು ಮಕ್ಕಳ ಪ್ರತಿಭೆ ಗುರುತಿಸಬೇಕು’ ಎಂದರು.

ಕಾರ್ಯಕ್ರಮದಲ್ಲಿ ರಸಪ್ರಶ್ನೆ, ಸೆಮಿನಾರ್, ಚಿತ್ರಕಲೆ ಹಾಗೂ ಕಂಠಪಾಠ ಪದ್ಯಗಳನ್ನು ಬರೆಯುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಿಸಲಾಯಿತು. ಎಲ್ಲಾ ಸ್ಪರ್ಧೆಗಳಲ್ಲಿ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಬಾಗೇಪಲ್ಲಿಯ ಯಂಗ್ ಇಂಡಿಯಾ ಶಾಲೆ ಚಾಂಪಿಯನ್ ಟ್ರೋಪಿ ಪಡೆದುಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT