ಬುಧವಾರ, ಮೇ 25, 2022
30 °C

ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ‘ರಾಷ್ಟ್ರೀಯ ಮತದಾರರ ದಿನಾಚರಣೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಇದರ ಉದ್ದೇಶ ಯುವ ಮತದಾರರಿಗೆ ಚುನಾವಣೆ ಮತ್ತು ಮತದಾನ ಕುರಿತು ಜಾಗೃತಿ ಮೂಡಿಸುವುದಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯ
ತಿಳಿಸಿದರು.

ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ರಾಷ್ಟ್ರೀಯ ಮತದಾರರ ದಿನಾಚರಣೆಗೆ ಸಂಬಂಧಿಸಿದಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ಪರ್ಧಾತ್ಮಕ ಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ 18 ವರ್ಷ ತುಂಬಿದ ಯುವಕ, ಯುವತಿಯರು ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು. ಇದರಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢವಾಗಿರುತ್ತದೆ ಎಂದು
ತಿಳಿಸಿದರು.

ಸುಮಾರು 80 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಇಒ ಚಂದ್ರಕಾಂತ್ ಸ್ಪರ್ಧೆ ವೀಕ್ಷಿಸಿದರು. ಶಿಕ್ಷಣ ಸಂಯೋಜಕ ಈ. ಭಾಸ್ಕರ ಗಡ, ಮುಖ್ಯಶಿಕ್ಷಕಿ ಮಂಜುಳಾ, ತೀರ್ಪುಗಾರರಾದ ಶಂಕರಪ್ಪ, ಜಗದೀಶ್ ಬಸವನಗೌಡ, ನಾಗೇಶ್, ಸತೀಶ್, ದಿವ್ಯ ಡಿಸೋಜ, ಕಮಲಮ್ಮ ಹಾಜರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.