ಸೋಮವಾರ, ಸೆಪ್ಟೆಂಬರ್ 20, 2021
30 °C

ಚೇಳೂರು: ಕೆನೆಭರಿತ ಹಾಲಿನ ಪುಡಿ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚೇಳೂರು: ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ದೊರೆಯುವಂತೆ ಮಾಡಲು ಜೂನ್, ಜುಲೈ ತಿಂಗಳಿಗೆ ಕೆನೆಭರಿತ‌ ಹಾಲಿನ ಪುಡಿ ವಿತರಿಸಲು ಶಿಕ್ಷಣ‌ ಇಲಾಖೆಯು ಅನುದಾನ ಬಿಡುಗಡೆ ಮಾಡಿದ್ದು, ಎರಡು ತಿಂಗಳ ಹಾಲಿನ ಪುಡಿಯನ್ನು ಮಕ್ಕಳಿಗೆ ನೀಡಲಾಗಿದೆ ಎಂದು ಮರವಪಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವಿ. ಮದ್ದಿರೆಡ್ಡಿ ತಿಳಿಸಿದರು.

ಹಾಲಿನ ಪುಡಿ ವಿತರಿಸಿದ ಬಳಿಕ ಮಾತನಾಡಿದ ಅವರು, ಪ್ರತಿ ತಿಂಗಳು ಒಂದು ಕೆ.ಜಿ ಕೆನೆಭರಿತ ಹಾಲಿನ ಪುಡಿಯನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಆ ಮೂಲಕ ಕ್ಷೀರಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಇದರಿಂದ ಸಂಕಷ್ಟದಲ್ಲಿರುವ ರೈತರು ಮತ್ತು ಹಾಲು‌ ಉತ್ಪಾದಕರಿಗೆ ಸರ್ಕಾರದಿಂದ ಸಕಾಲಿಕ‌ ನೆರವು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಸಹ ಶಿಕ್ಷಕ ಕೆ.ವಿ. ಜಯರಾಮರೆಡ್ಡಿ, ಪೋಷಕರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.