ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾಮಟ್ಟದ ಸೋಪಾನ ಪರೀಕ್ಷಾ ಶಿಬಿರ

Last Updated 28 ಮಾರ್ಚ್ 2021, 5:10 IST
ಅಕ್ಷರ ಗಾತ್ರ

ಶಿಡ್ಲಘಟ್ಟ:‘ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಡೆಯುತ್ತಿರುವ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗಿಯಾಗಿ ಜಿಲ್ಲೆಗೆ ಉತ್ತಮ ಫಲಿತಾಂಶವನ್ನು ತಂದು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಪುರಸ್ಕಾರ ಪಡೆದುಕೊಳ್ಳಲು ಸಂಪೂರ್ಣ ಮಾರ್ಗದರ್ಶನ ಮಾಡಿದ್ದೇವೆ’ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಸಿ.ಬಿ. ಪ್ರಕಾಶ್ ತಿಳಿಸಿದರು.

ನಗರದ ಉಲ್ಲೂರುಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ತೃತೀಯ ಸೋಪಾನ ಪರೀಕ್ಷಾ ಶಿಬಿರಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ 6 ತಾಲ್ಲೂಕುಗಳಿಂದ ಒಟ್ಟಾರೆ ನೂರ ಎಪ್ಪತ್ತು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷೆಯಲ್ಲಿ ಮೌಖಿಕ, ಲಿಖಿತ ಮತ್ತು ಪ್ರಾಯೋಗಿಕ ಶಿಬಿರ ಕೌಶಲಗಳು, ಸ್ಕೌಟ್ಸ್ ಮತ್ತು ಗೈಡ್ಸ್ ಕೌಶಲ ಮತ್ತು ವ್ಯಾಯಾಮಗಳು ಮುಂತಾದ ಪಠ್ಯಾಂಶಗಳನ್ನು ಪರೀಕ್ಷಿಸಲಾಗುತ್ತಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ವರ್ಷ ನಡೆಯಲಿರುವ ರಾಜ್ಯಪಾಲರಿಂದ ಪಡೆಯುವ ರಾಜ್ಯ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆಯುತ್ತಾರೆ ಎಂದು ಹೇಳಿದರು.

ಜಿಲ್ಲಾ ಸಂಸ್ಥೆಯ ಸ್ಕೌಟ್ಸ್ ವಿಭಾಗದ ಆಯುಕ್ತ ಏಕಾಂಬರಂ ಮಾತನಾಡಿ, ವಿದ್ಯಾರ್ಥಿಗಳು ಅತ್ಯುತ್ತಮ ಜೀವನ ಕೌಶಲಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದರು.

ಜಿಲ್ಲಾ ಸಂಸ್ಥೆಯ ಗೈಡ್ ವಿಭಾಗದ ಆಯುಕ್ತೆ ಮಂಜುಳಾ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಸ್ಕೌಟ್ಸ್‌ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಗೈಡ್ಸ್‌ ವಿಭಾಗದ ತರಬೇತಿ ನಾಯಕರಾಗಿ ಲಕ್ಷ್ಮಿ ಹೊನ್ನಪ್ಪನಾಯಕ್, ಸಹ ನಾಯಕರಾಗಿ ಟಿ.ಕೆ. ನಾಗೇಶ್, ವಿಶ್ವನಾಥ್, ನಾಗಲಕ್ಷ್ಮಿ, ಮುನಿರಾಜು, ಹೇಮಾಕುಮಾರಿ, ಆವಲಕೊಂಡಪ್ಪ ಅವರು ಕಾರ್ಯ ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಬಾಗೇಪಲ್ಲಿ ತಾಲ್ಲೂಕು ಕಾರ್ಯದರ್ಶಿ ಶಿವರಾಜು, ಚಿಂತಾಮಣಿ ತಾಲ್ಲೂಕು ಕಾರ್ಯದರ್ಶಿ ಉಪೇಂದ್ರ ಕುಮಾರ್, ನಾಗರಾಜು, ನಾರಾಯಣಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ ಪಿಳ್ಳಣ್ಣ, ಮುಖ್ಯಶಿಕ್ಷಕ ರಮೇಶ್, ಚಂದ್ರಕಲಾ, ಜಯಂತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT