ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗೇಪಲ್ಲಿ: ದೀಪಾವಳಿ ವಿಶೇಷಾಂಕ ಬಿಡುಗಡೆ

Last Updated 24 ಅಕ್ಟೋಬರ್ 2021, 4:29 IST
ಅಕ್ಷರ ಗಾತ್ರ

ಬಾಗೇಪಲ್ಲಿ: ‘ಗ್ರಾಮೀಣ ಗಡಿ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ಸುದ್ದಿ ಪ್ರಕಟಿಸುವುದರ ಜೊತೆಗೆ ವಿಶೇಷ ಲೇಖನಗಳನ್ನು ಪ್ರಕಟಿಸುತ್ತಿರುವ ಪ್ರಜಾವಾಣಿ ದಿನಪತ್ರಿಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ’ ತಹಶೀಲ್ದಾರ್ ಡಿ.ಎ. ದಿವಾಕರ್ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ‘ಪ್ರಜಾವಾಣಿ’ ದೀಪಾವಳಿ ವಿಶೇಷಾಂಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಪತ್ರಿಕೆಯಲ್ಲಿ ರಾಜಕೀಯ, ಸಾಮಾಜಿಕ, ಧಾರ್ಮಿಕ, ಪ್ರತಿದಿನದ ಆಗುಹೋಗುಗಳು, ದೇಶ-ವಿದೇಶದ ಸುದ್ದಿಗಳು ಪ್ರಕಟವಾಗುತ್ತಿವೆ. ಎಲ್ಲಾ ಪತ್ರಿಕೆಗಳಿಂದ ವಿಭಿನ್ನ ಹಾಗೂ ವಿಶೇಷವಾಗಿದೆ. ಕವಿಗಳು, ಸಾಹಿತಿಗಳು, ರಾಜಕಾರಣಿಗಳು, ಹೋರಾಟಗಾರರು, ಅಧಿಕಾರಿಗಳು ಸೇರಿದಂತೆ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ ಪತ್ರಿಕೆಯನ್ನು ಆಸಕ್ತಿಯಿಂದ ಓದುತ್ತಾರೆ ಎಂದರು.

‘ಪ್ರಜಾವಾಣಿ ನನ್ನ ಜ್ಞಾನಾರ್ಜನೆಗೆ ಸಹಕಾರಿಯಾಗಿದೆ. ಹಲವು ವರ್ಷಗಳಿಂದ ಈ ಪತ್ರಿಕೆಯನ್ನು ಓದುತ್ತಿದ್ದೇನೆ. ಜನರ ಸಮಸ್ಯೆ ಬಗ್ಗೆ ಮತ್ತಷ್ಟು ಲೇಖನಗಳು ಪ್ರಕಟವಾಗಬೇಕು’ ಎಂದು ಆಶಿಸಿದರು.

ತಾ.ಪಂ. ಕಾರ್ಯ ನಿರ್ವಹಣಾಧಿ ಕಾರಿ ಎಚ್.ಎನ್. ಮಂಜುನಾಥಸ್ವಾಮಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ, ಸಬ್ ಇನ್‌ಸ್ಪೆಕ್ಟರ್ ಆರ್. ಗೋಪಾಲರೆಡ್ಡಿ, ತಾಲ್ಲೂಕು ಪಶುಸಂಗೋಪನಾ ಇಲಾಖೆಯ ಅಧಿಕಾರಿ ಡಾ.ಕೃಷ್ಣಮೂರ್ತಿ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಚಿನ್ನಕೈವಾರಮಯ್ಯ ವಿಶೇಷಾಂಕವನ್ನು ಬಿಡುಗಡೆಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT