ಬಡವರನ್ನು ಕಚೇರಿಗೆ ಅಲೆದಾಡಿಸಬೇಡಿ

7
ಜನತಾ ದರ್ಶನದಲ್ಲಿ ಅಧಿಕಾರಿಗಳಿಗೆ ಶಾಸಕ ಡಾ.ಕೆ.ಸುಧಾಕರ್ ಸಲಹೆ

ಬಡವರನ್ನು ಕಚೇರಿಗೆ ಅಲೆದಾಡಿಸಬೇಡಿ

Published:
Updated:
Deccan Herald

ಚಿಕ್ಕಬಳ್ಳಾಪುರ: ‘ಪ್ರತಿಯೊಂದು ಇಲಾಖೆ ಅಧಿಕಾರಿಗಳು ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸದೆ ಸಕಾಲದಲ್ಲಿ ಕೆಲಸ ಮಾಡಿಕೊಡುವ ಮೂಲಕ ಜನಸ್ನೇಹಿಯಾಗಿ ಕೆಲಸ ಮಾಡಬೇಕು’ ಎಂದು ಅಧಿಕಾರಿಗಳಿಗೆ ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

ತಾಲ್ಲೂಕು ಕಚೇರಿಯಲ್ಲಿ ಸೋಮವಾರ ನಡೆದ ಜನತಾ ದರ್ಶನದಲ್ಲಿ ಅವರು ಸಾರ್ವಜನಿಕರ ಅಹವಾಲು ಆಲಿಸುತ್ತ ಅವುಗಳನ್ನು ತ್ವರಿತಗತಿಯಲ್ಲಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಬಡ ಜನರ ಕೆಲಸಗಳನ್ನು ಆದ್ಯತೆ ಮೆರೆಗೆ ಮಾಡಿಕೊಡಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುತ್ತದೆ. ಜನತಾ ದರ್ಶನದಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ವಾರದೊಳಗೆ ಬಗೆಹರಿಸಬೇಕು. ಮತ್ತೆ ಮತ್ತೆ ಸಾರ್ವಜನಿಕರು ಒಂದೇ ಸಮಸ್ಯೆಯನ್ನು ಹಿಡಿದು ತಮ್ಮ ಬಳಿ ಬಂದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುತ್ತೇನೆ’ಎಂದು ಎಚ್ಚರಿಕೆ ನೀಡಿದರು.

ಜನತಾ ದರ್ಶನದಲ್ಲಿ ಸುಮಾರು 75 ಅಹವಾಲುಗಳು ಸಲ್ಲಿಕೆಯಾದವು. ಪಿಂಚಣಿ ಬರುತ್ತಿಲ್ಲ. ಕಂದಾಯ ಅಧಿಕಾರಿಗಳು ಖಾತೆ ಮಾಡಿಕೊಡುತ್ತಿಲ್ಲ. ನಮ್ಮ ವಾರ್ಡ್‌ಗೆ ಕುಡಿಯುವ ನೀರು ಬರುತ್ತಿಲ್ಲ. ಶಾಲೆಯಲ್ಲಿ ಶಿಕ್ಷಕರಿಲ್ಲ. ರಸ್ತೆ ಹಾಳಾಗಿದೆ. ಸ್ಮಶಾನಕ್ಕೆ ಜಾಗವಿಲ್ಲ. ಪಡಿಚರ ಚೀಟಿ ಇಲ್ಲ ಎಂಬ ದೂರುಗಳು ಕೇಳಿಬಂದವು.

ಮಾಜಿ ಶಾಸಕ ಶಿವಾನಂದ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಸದಸ್ಯರಾದ ತಿರುಮಳಪ್ಪ, ಸತೀಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ನಾಗೇಶ್, ತಹಶೀಲ್ದಾರ್ ನರಸಿಂಹಮೂರ್ತಿ ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !